ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ ಅಧಿಕಾರಕ್ಕೆ ತರುವುದೇ ಗುರಿ: ನಿಖಿಲ್‌ ಕುಮಾರಸ್ವಾಮಿ

Last Updated 3 ಡಿಸೆಂಬರ್ 2020, 2:37 IST
ಅಕ್ಷರ ಗಾತ್ರ

ಮದ್ದೂರು: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನನ್ನ ಗುರಿ’ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜೆಡಿಎಸ್‌ ಕಾರ್ಯಕರ್ತರ ಪಕ್ಷವಾಗಿದ್ದು, 30 ಜಿಲ್ಲೆಗಳಲ್ಲಿ ಎಲ್ಲಾ ಧರ್ಮ, ಜಾತಿಯ ಯುವಕರನ್ನು ಸೆಳೆಯುವ ಮೂಲಕ ಪಕ್ಷ ಸಂಘಟನೆ ಮಾಡಲಾಗುವುದು. 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷವನ್ನು ಅಧಿಕಾರಕ್ಕೆ ತರುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗ್ರಾ.ಪಂ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ’ ಎಂದು ಹೇಳಿದರು.

‘ಬಿಜೆಪಿ– ಜೆಡಿಎಸ್ ಮೈತ್ರಿ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಮಾತ್ರ ಸೀಮಿತವಾಗಿದೆ. ಜಿಲ್ಲೆಯ ರೈತರಿಗೆ ಹಾಗೂ ಮಂಡ್ಯ ಜಿಲ್ಲೆಯ ಅನುಕೂಲವಾಗಲೆಂಬ ಉದ್ದೇಶದಿಂದ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಮತ್ತು ಮುಖ್ಯಮಂತ್ರಿಗಳು ಸೇರಿ ತೀರ್ಮಾನ ಕೈಗೊಂಡಿದ್ದಾರೆ’ ಎಂದು ಸ್ಪಷ್ಟಪಡಿಸಿದರು.

‘ಕೇಂದ್ರ ಸರ್ಕಾರದ ಎಪಿಎಂಸಿ ಕಾಯ್ದೆ ಹಾಗೂ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಜೆಡಿಎಸ್ ಪಕ್ಷದ ಬೆಂಬಲವಿದೆ ರೈತರಿಗೆ ಅನ್ಯಾಯವಾಗಲು ನಮ್ಮ ಪಕ್ಷ ಬಿಡುವುದಿಲ್ಲ ನಮ್ಮ ಧ್ವನಿ ರೈತರ ಪರವಾಗಿ ಸದಾ ಇರುತ್ತದೆ. ಮೈಷುಗರ್ ಹೊರಗುತ್ತಿಗೆಗೆ ಸಂಬಂಧಿಸಿದಂತೆ ಜಿಲ್ಲೆಯ ಜೆಡಿಎಸ್‌ ಶಾಸಕರೊಂದಿಗೆ ಚರ್ಚಿಸಿ ಮುಂದಿನ ನಡೆಯನ್ನು ತೀರ್ಮಾನಿಸಲಾಗುವುದು’ ಎಂದು ಹೇಳಿದರು.

ಪುರಸಭೆ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷೆ ಸುಮಿತ್ರಾ, ಸದಸ್ಯರಾದ ವಿನುತಾ, ಸಿದ್ದು, ಆದಿಲ್, ಪಿಎಲ್‌ಡಿ ಬ್ಯಾಂಕ್ ಮರಿದೇವರು, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್, ತಾಲ್ಲೂಕು ಘಟಕದ ಅಧ್ಯಕ್ಷ ಚಿಕ್ಕ ತಿಮ್ಮೇಗೌಡ, ಮುಖಂಡರಾದ ಸಂತೋಷ್‌ ತಮ್ಮಣ್ಣ, ಎಂ.ಪಿ ಮಂಜುನಾಥ್, ಸುಧೀರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT