ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಂಡವಪುರ: ಮೈತ್ರಿಕೂಟದ ತೆಕ್ಕೆಗೆ ಪುರಸಭೆ

Published 4 ಸೆಪ್ಟೆಂಬರ್ 2024, 4:46 IST
Last Updated 4 ಸೆಪ್ಟೆಂಬರ್ 2024, 4:46 IST
ಅಕ್ಷರ ಗಾತ್ರ

ಪಾಂಡವಪುರ: ಇಲ್ಲಿನ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಗಾದಿಗೆಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೆಡಿಎಸ್‌ನ ಜ್ಯೋತಿಲಕ್ಷ್ಮಿ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ಎಲ್.ಅಶೋಕ್ ಅವಿರೋಧವಾಗಿ ಆಯ್ಕೆಯಾದರು.

ಒಟ್ಟು 23 ಸದಸ್ಯ ಬಲ ಹೊಂದಿರುವ ಪುರಸಭೆಯಲ್ಲಿ ಜೆಡಿಎಸ್ 18, ರೈತಸಂಘ, ಕಾಂಗ್ರೆಸ್ ಮೈತ್ರಿಕೂಟ 4 ಹಾಗೂ ಬಿಜೆಪಿಯ ಒಬ್ಬರು ಸದಸ್ಯರು ಇದ್ದಾರೆ.

ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಜ್ಯೋತಿಲಕ್ಷ್ಮಿ ಹಾಗ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಎಲ್.ಅಶೋಕ್ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಚುನಾವಣಾಧಿಕಾರಿ  ತಹಶೀಲ್ದಾರ್ ಎಸ್.ಸಂತೋಷ್ ಅವಿರೋಧ ಆಯ್ಕೆಯನ್ನು ಘೋಷಿಸಿದರು.

 ಬಿಜೆಪಿಯ ಏಕೈಕ ಸದಸ್ಯ 15ನೇ ವಾರ್ಡ್‌ ಎಲ್.ಅಶೋಕ್ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಪಾಲನೆ ಮಾಡಬೇಕು ಎಂಬ ಉದ್ದೇಶದಿಂದ ಉಪಾಧ್ಯಕ್ಷ ಸ್ಥಾನವನ್ನು ಬಿಜೆಪಿಗೆ ಬಿಟ್ಟುಕೊಟ್ಟಿದ್ದರು.

 ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ವಿತರಿಸಿ ಸಂಭ್ರಮಿಸಿದರು. ಅಧ್ಯಕ್ಷೆ ಜ್ಯೋತಿಲಕ್ಷ್ಮಿ ಮಾತನಾಡಿ,  ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಉಪಾಧ್ಯಕ್ಷ ಎಲ್.ಅಶೋಕ್ ಮಾತನಾಡಿದರು. ಪುರಸಭೆ ಸದಸ್ಯರಾದ ಶಿವಕುಮಾರ್, ಚಂದ್ರು, ಅರ್ಚನಾ ಚಂದ್ರು, ಸರಸ್ವತಿ, ಸುಧಾ, ಪಾರ್ಥಸಾರಥಿ, ಆರ್.ಸೋಮಶೇಖರ್, ಎಂ.ಗಿರೀಶ್, ಗೀತಾ ಆರ‍್ಮುಗಂ, ಪುರಸಭೆ ಮುಖ್ಯಾಧಿಕಾರಿ ಸತೀಶ್‌ಕುಮಾರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT