ನಾಗಮಂಗಲ (ಮಂಡ್ಯ ಜಿಲ್ಲೆ): ಜೆಡಿಎಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯಕ್ರಮವನ್ನು ಪಟ್ಟಣದ ಎಂ.ಆರ್.ಪಿ ಸಮುದಾಯ ಭವನದಲ್ಲಿ ಜೂ.30ರ ಮಧ್ಯಾಹ್ನ 12 ಗಂಟೆಗೆ ಆಯೋಜಿಸಲಾಗಿದ್ದು, ಕಾರ್ಯಕ್ರಮಕ್ಕೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಚಾಲನೆ ನೀಡಲಿದ್ದು, ಪಕ್ಷದ ಹಲವು ನಾಯಕರು ಭಾಗವಹಿಸಲಿದ್ದಾರೆ ಎಂದು ಮಾಜಿ ಶಾಸಕ ಸುರೇಶ್ಗೌಡ ಹೇಳಿದರು.

ಪಟ್ಟಣದಲ್ಲಿರುವ ಗೃಹ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಜೆಡಿಎಸ್ ಪಕ್ಷದಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸದಸ್ಯತ್ವ ನೋಂದಣಿಯಾಗಿರುವುದು ನಮ್ಮ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಎಂಬ ಮಾಹಿತಿಯಿದೆ. ನಿಖಿಲ್ ಕುಮಾರಸ್ವಾಮಿ ಅವರು ಸದಸ್ಯತ್ವ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಿದ್ದು, ಈ ಕಾರ್ಯಕ್ರಮದಲ್ಲಿ ಸುಮಾರು ಐದು ಸಾವಿರ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದರು.

ರಾಜ್ಯದಲ್ಲಿ ಸುಮಾರು 50 ಲಕ್ಷ ಸದಸ್ಯತ್ವ ನೋಂದಣಿ ಮಾಡಿಸುವ ಗುರಿಯನ್ನು ನಾವುಗಳು ಹೊಂದಿದ್ದೇವೆ. ರಾಜ್ಯದಲ್ಲಿ ಇತರೆ ಪಕ್ಷಗಳು ಕೂಡ ಡಿಜಿಟಲ್ ನೋಂದಣಿ ಮಾಡಿದ್ದು, ಇತರೆ ಪಕ್ಷಗಳಿಗಿಂತ ಮತದಾರರು ನಮ್ಮ ಪಕ್ಷದ ನೋಂದಣಿಗೆ ಹೆಚ್ಚಿನ ಆಸಕ್ತಿಯಿಂದ ಸ್ವಯಂಪ್ರೇರಿತರಾಗಿ ಈಗಾಗಲೇ ನೋಂದಣಿ ಮಾಡಿಸುತ್ತಿದ್ದಾರೆ ಎಂದರು.

ರಾಜ್ಯದಲ್ಲಿರುವ ಲೂಟಿ ಸರ್ಕಾರದ ವಿರುದ್ಧ ಜನರು ಬೇಸತ್ತು ಜೆಡಿಎಸ್ ಪಕ್ಷಕ್ಕೆ ಜನರು ಮನ್ನಣೆ ನೀಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.