ಭಾನುವಾರ, ಅಕ್ಟೋಬರ್ 17, 2021
22 °C

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸುತ್ತೇನೆ: ಶ್ರೀಕಂಠೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪ: ‘ನಾನು 12 ವರ್ಷಗಳಿಂದ ದಕ್ಷಿಣ ಪದವೀಧರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಕ್ಷೇತ್ರ ಬದಲಾಯಿಸಲು ಚಿಂತಿಸಿದ್ದೇನೆ. ಮಂಡ್ಯ ಲೋಕಸಭೆ ಅಥವಾ ಮಂಡ್ಯ, ಮದ್ದೂರು, ನಾಗಮಂಗಲ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸುವ ಇಂಗಿತವನ್ನು ಪಕ್ಷದ ವರಿಷ್ಠರೊಂದಿಗೆ ವ್ಯಕ್ತಪಡಿಸಿದ್ದೇನೆ’ ಎಂದು ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿದರು.

ಕೊಪ್ಪದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಜನರಿಗೆ ಸುಲಭವಾಗಿ ಸಿಗುವ ಸಂಸದರು ಬೇಕು. ಬೆಂಗಳೂರು ಹಾಗೂ ದೆಹಲಿಯಲ್ಲಿ ಹುಡುಕಾಡುವ ಸಂಸದರು ಜಿಲ್ಲೆಗೆ ಅಗತ್ಯವಿಲ್ಲ ಎಂದರು.

ಸ್ಥಳೀಯರು ಸಂಸದರಾಗ ಬೇಕು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಪ್ರಬಲ ಆಕಾಂಕ್ಷಿ. ಲೋಕಸಭೆ ಅಥವಾ ವಿಧಾ ನಸಭೆಗೆ ಸ್ಪರ್ಧಿಸುವುದು ನಿಶ್ಚಿತ. ಪಕ್ಷದ ವರಿಷ್ಠರು ತೆಗೆದು ಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದರು.

ನಾಗಮಂಗಲ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್, ಕಾರ್ಯಾಧ್ಯಕ್ಷ ಚಿಕ್ಕೊನಹಳ್ಳಿ ತಮ್ಮಯ್ಯ, ಜಿಲ್ಲಾ ಉಪಾಧ್ಯಕ್ಷ ಬಿದರಕೋಟೆ ಕುಶ, ಮುಖಂಡರಾದ ದಾಕ್ಷಾಯಿಣಿ ಕೌಡ್ಲೆ ರಾಮಣ್ಣ, ಕೊಪ್ಪ ತಮ್ಮಣ್ಣನಾಯಕ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು