ಮಂಡ್ಯ: ನಗರದ ಮನುಗನಹಳ್ಳಿಯಲ್ಲಿ ನ್ಯಾಯಾಧೀಶರ ವಸತಿ ಸಮುಚ್ಚಯಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಹೈಕೋರ್ಟ್ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರು ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.

ವಸತಿ ಸಮುಚ್ಚಯಗಳ ನಿರ್ಮಾಣಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಪ್ರಸ್ತಾವ ಸಲ್ಲಿಸಲಾಗಿತ್ತು. ಸದರಿ ಜಾಗಕ್ಕೆ ಕಟ್ಟಡದ ವಿನ್ಯಾಸ ಮತ್ತು ಉಳಿಕೆ ಕಾಮಗಾರಿಗಳ ವೀಕ್ಷಣೆ ಮತ್ತು ಪಾರ್ಕಿಂಗ್ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ ಇರುವ ಏಳು ಸಿವಿಲ್ ನ್ಯಾಯಾಲಯ ಸಂಕೀರ್ಣಕ್ಕೆ ಸಂಬಂಧಪಟ್ಟಂತೆ ಕೃಷಿ ಇಲಾಖೆಗೆ ಸೇರಿದ 22.12 ಗುಂಟೆ ಜಾಗವನ್ನು ಈಗಾಗಲೇ ಗುರುತಿಸಲಾಗಿದೆ. ಈ ಜಾಗದಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಮಾಡಲು ₹25 ಕೋಟಿ ವೆಚ್ಚದಲ್ಲಿ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಆನಂದ್ ಎಂ, ಮಂಡ್ಯ ತಹಶೀಲ್ದಾರ್ ವಿಶ್ವನಾಥ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಟಿ.ಎಸ್. ಸತ್ಯಾನಂದ ಪಾಲ್ಗೊಂಡಿದ್ದರು.

ಮದ್ದೂರಿಗೂ ಭೇಟಿ:

ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರು ಮದ್ದೂರಿಗೂ ಭೇಟಿ ನೀಡಿ, ನ್ಯಾಯಾಲಯಕ್ಕೆ ಸಂಬಂಧಪಟ್ಟ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಮದ್ದೂರು ನಗರದಲ್ಲಿ ರೇಷ್ಮೆ ಇಲಾಖೆಯ ವ್ಯಾಪ್ತಿಗೆ ಬರುವ 4.35 ಎಕರೆ ಜಾಗವನ್ನು ಗುರುತಿಸಿ ನ್ಯಾಯಾಲಯ ನಿರ್ಮಾಣಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸ್ಥಳವನ್ನು ಹಸ್ತಾಂತರಿಸಲಾಗಿದೆ.

ಈ ಜಾಗದಲ್ಲಿ ₹21 ಕೋಟಿ ವೆಚ್ಚದಲ್ಲಿ ನ್ಯಾಯಾಲಯ ಸಂಕೀರ್ಣ ಮತ್ತು ನ್ಯಾಯಾಧೀಶರ ವಸತಿ ಗೃಹಗಳ ನಿರ್ಮಾಣ ಕಾಮಗಾರಿ ಮಾಡಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.