ಮಂಡ್ಯ: ಕಬ್ಬಿನ ಗದ್ದೆಯಲ್ಲಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ಮಾಡಿದ ಪ್ರಕರಣ ಸೇರಿ ಇತರ 4 ಹೀನ ಕೃತ್ಯಗಳಲ್ಲಿ ಆರೋಪಿಗಳಾಗಿರುವ ಬಾಲಕರನ್ನು ವಯಸ್ಕರು ಎಂದು ಪರಿಗಣಿಸಿ, ವಿಚಾರಣೆ ನಡೆಸುವಂತೆ ಬಾಲ ನ್ಯಾಯ ಮಂಡಳಿ ಅಧ್ಯಕ್ಷೆ ಎನ್.ಡಿ.ಮಾಲಾ ಗುರುವಾರ ಆದೇಶಿಸಿದ್ದಾರೆ.

ಮದ್ದೂರು ತಾಲ್ಲೂಕಿನ ಕೊಪ್ಪ ಬಳಿ ನಡೆದ ಅತ್ಯಾಚಾರ ಯತ್ನ, ಕೊಲೆ ಪ್ರಕರಣ, ಭಾರತೀನಗರದ ಕೆ.ಶೆಟ್ಟಹಳ್ಳಿ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣ, ಮಂಡ್ಯ ನಗರದಲ್ಲಿ ನಡೆದ ಕೊಲೆ ಪ್ರಕರಣ, ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಬಾಲಕರು ಆರೋಪಿಗಳಾಗಿದ್ದಾರೆ. ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿವೆ.

ಆರೋಪಿಗಳು ಮಾಡಿರುವ ಕೃತ್ಯ ಹೀನ ಸ್ವರೂಪದ್ದಾಗಿದ್ದು, ವಯಸ್ಕರು ಎಂದೇ ಪರಿಗಣಿಸಿ ವಿಚಾರಣೆ ನಡೆಸಬೇಕು. ನಂತರ ಪ್ರಕರಣವನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕು ಎಂದು ಆದೇಶ ಮಾಡಿದ್ದಾರೆ.

ಸರ್ಕಾರದ ಪರ ಹಿರಿಯ ಸಹಾಯಕ ಅಭಿಯೋಜಕಿ ಜಿ.ವೆಂಕಟಲಕ್ಷ್ಮಮ್ಮ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.