ಮಂಡ್ಯ: ‘87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೆಸರಿನಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಉನ್ನತ ಮಟ್ಟದ ತನಿಖೆ ಆಗಬೇಕು’ ಎಂದು ಮಾಜಿ ಶಾಸಕ ಕೆ.ಅನ್ನದಾನಿ ಒತ್ತಾಯಿಸಿದರು.

2024ರ ಡಿಸೆಂಬರ್ ತಿಂಗಳಿನಲ್ಲಿ ಮಂಡ್ಯದಲ್ಲಿ ನಡೆದ ಸಮ್ಮೇಳನ ನಡೆದ ಕೆಲ ದಿನಗಳಲ್ಲೇ ನಾನು ಭ್ರಷ್ಟಾಚಾರದ ಬಗ್ಗೆ ದನಿ ಎತ್ತಿದ್ದೆ. ಸರ್ಕಾರ ನನ್ನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಸಮ್ಮೇಳನದ ಹೆಸರಿನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರವೆಸಗಿ ಸ್ವೇಚ್ಛಾಚಾರ ನಡೆಸಿರುವುದು ಕೆಲ ದಾಖಲೆಗಳಿಂದ ಸಾಬೀತಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಆರೋಪಿಸಿದರು.

₹500 ಬೆಲೆಯ ಹಣ್ಣಿನ ಬುಟ್ಟಿಗೆ ₹2,500, ₹900 ಬೆಲೆಯ ರೇಷ್ಮೆ ಸಾಲಿಗೆ ₹1,680, ಸಚಿವರು ಹಾಗೂ ಮುಖ್ಯಮಂತ್ರಿಗೆ ನೀಡಿರುವ ನೆನಪಿನ ಕಾಣಿಕೆಗೆ ₹31,500 ಭರಿಸಿರುವುದು ಭ್ರಷ್ಟಾಚಾರವಲ್ಲವೇ ಮತ್ತೇನು? ಸಮ್ಮೇಳನಕ್ಕೆ ₹30 ಕೋಟಿ ವ್ಯಯಿಸಲಾಗಿದೆ ಎಂದು ಲೆಕ್ಕಪತ್ರಗಳನ್ನು ನೀಡಲಾಗಿದೆ. ₹10ಕ್ಕೆ ಆಗಬೇಕಾದ ಕೆಲಸಕ್ಕೆ ₹100 ಸೇರಿಸಿ ಸುಳ್ಳಿನ ಲೆಕ್ಕ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಸಾಹಿತ್ಯದ ಹೆಸರಿನಲ್ಲಿ ಮಂಡ್ಯ ಜಿಲ್ಲೆಗೆ ಕಳಂಕ ತರುವ ಪ್ರಯತ್ನದಲ್ಲಿ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಕಾರ್ಯ ನಿರ್ವಹಿಸಿ ಜಿಲ್ಲೆಯ ಮಾನ ಮರ್ಯಾದೆ ಹರಾಜು ಹಾಕಿದ್ದಾರೆ. ವ್ಯಾಪಕ ಭ್ರಷ್ಟಾಚಾರವು ಸಾರಿಗೆ, ವಸತಿ, ವೇದಿಕೆ ಮತ್ತು ಆಹಾರ ಸಮಿತಿಯಲ್ಲಿ ನಡೆದಿದೆ. ವೇದಿಕೆ ಸಮಿತಿಗೆ ಸುಮಾರು ತಲಾ ₹8.70 ಕೋಟಿ ಪಾವತಿಸಲಾಗಿದೆ. ಸದರಿ ಹಣದಲ್ಲಿ ದುಪ್ಪಟ್ಟು ವಸ್ತುಗಳ ಖರೀದಿ ನಡೆಸಬಹುದಿತ್ತು. ಈ ಹಿನ್ನೆಲೆಯಲ್ಲಿ ಹಾಲಿ ಅಥವಾ ಮಾಜಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ, ಸಿಐಡಿ, ಇಡಿ ಅಥವಾ ಸಿಬಿಐ ತನಿಖೆ ಆಗಲಿ ಎಂದು ಆಗ್ರಹಿಸಿದರು.

ಲೂಟಿ ಹೊಡೆಯಲು ಕಾವೇರಿ ಆರತಿ ಬೇಕೇ?

ಕಾವೇರಿ ನದಿ ಪಾತ್ರದ ಕನ್ನಂಬಾಡಿ ಅಣೆಕಟ್ಟೆ ಬಳಿ ₹92 ಕೋಟಿ ವೆಚ್ಚದಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ಹೊರಟಿರುವುದು ಹಣ ಲೂಟಿ ಮಾಡಲು ಎಂದು ಆರೋಪಿಸಿದ ಅನ್ನದಾನಿ ಅವರು, ಕಾವೇರಿ ಆರತಿ ಬದಲು ನಾಲೆಯ ಆಧುನೀಕರಣಕ್ಕೆ ಒತ್ತು ನೀಡಲಿ, ಆ ಮೂಲಕ ಮೌಢ್ಯಾಚರಣೆಗೆ ಅಂತ್ಯವಾಡಲಿ ಎಂದು ಆಗ್ರಹಿಸಿದರು.

ಮುಖಂಡರಾದ ಸದಾನಂದ, ಸಾತನೂರು ಜಯರಾಂ, ಶ್ರೀಧರ್, ಹನುಮಂತು, ಪುಟ್ಟಬುದ್ದಿ, ಸಿದ್ದಾಚಾರಿ, ದೊರೆಸ್ವಾಮಿ ಇದ್ದರು.

‘ಲೆಕ್ಕ ಕೊಡದ ಜೋಶಿ: ರಾಜ್ಯಪಾಲರಿಗೆ ದೂರು’

‘ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಅವರು ಸಮ್ಮೇಳನದ ಖರ್ಚಿನ ಬಗ್ಗೆ ಲೆಕ್ಕ ನೀಡದಿರುವುದು ಖಂಡನಾರ್ಹ. ಈ ಸಂಬಂಧ ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರಕ್ಕೆ ದೂರು ನೀಡಲಾಗುವುದು’ ಎಂದು ತಿಳಿಸಿದರು.

‘ಜರ್ಮನ್ ಟೆಂಟ್ ನಿರ್ಮಾಣಕ್ಕೆ ವಾಸ್ತವವಾಗಿ ಚದರ ಅಡಿಗೆ ₹15ರಿಂದ ₹18 ಬಾಡಿಗೆ ಇದೆ. ₹68 ವ್ಯಯಿಸಿರುವ ಹೊಣೆಗಾರಿಕೆಯನ್ನು ಮಳವಳ್ಳಿ ಶಾಸಕರು ಹೊರಬೇಕು. ಒಟ್ಟಾರೆ ಸಮ್ಮೇಳನದ ಹೆಸರಿನಲ್ಲಿ ಸುಮಾರು ₹15 ಕೋಟಿ ಭ್ರಷ್ಟಾಚಾರ ನಡೆಸಿರುವ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಬಹಳ ಎಚ್ಚರಿಕೆಯಿಂದ ಇದನ್ನು ನಿಭಾಯಿಸಬೇಕು’ ಎಂದು ಮಾಜಿ ಶಾಸಕ ಕೆ.ಅನ್ನದಾನಿ ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.