ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ: ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ದೂರಿ ಸ್ವಾಗತ

Published : 23 ಆಗಸ್ಟ್ 2024, 23:30 IST
Last Updated : 23 ಆಗಸ್ಟ್ 2024, 23:30 IST
ಫಾಲೋ ಮಾಡಿ
Comments

ಮಂಡ್ಯ: ಕರ್ನಾಟಕ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿರುವ ಕನ್ನಡ ಜ್ಯೋತಿ ರಥಯಾತ್ರೆ ಅರಕೆರೆ, ಕೊಡಿಯಾಲ ಮುಖಾಂತರ ಮಂಡ್ಯ ತಾಲ್ಲೂಕಿನ ಕೊತ್ತತ್ತಿಗೆ ಆಗಮಿಸಿದಾಗ ಅದ್ದೂರಿ ಸ್ವಾಗತ ನೀಡಲಾಯಿತು. 

ಗ್ರಾಮದ ವಿದ್ಯಾ ಗಣಪತಿ ವಿದ್ಯಾಸಂಸ್ಥೆ ಆವರಣದಲ್ಲಿ ಜಾನಪದ ಕಲಾವಿದರ ಕಲಾ ಪ್ರದರ್ಶನ, ಪೂರ್ಣಕುಂಭ ಸ್ವಾಗತ, ಕನ್ನಡದ ಅಭಿಮಾನವನ್ನು ಮೂಡಿಸುವ ಗೀತೆಗಳು ಮೊಳಗಿದವು. ಎಲ್ಲೆಲ್ಲೂ ಕನ್ನಡ ಪರ ಜೈಕಾರ, ಶಾಲಾ ಮಕ್ಕಳ ಕಲರವ ಕಂಡುಬಂದಿತು.

ನಂತರ ಬೇವಿನಹಳ್ಳಿಯಲ್ಲಿ ರಥಕ್ಕೆ ಪೂಜೆ ಸಲ್ಲಿಸಿದ ನಂತರ ಕ್ಯಾತುಂಗೆರೆ ಬಳಿಯ ಸಾಂಥೊಂ ಶಾಲೆಯ ಮಕ್ಕಳು ಸ್ವಾಗತಿಸಿದರು.

ಕನ್ನಡ ಸಾಹಿತ್ಯ ಸಮ್ಮೇಳನದ ಸಮನ್ವಯ ಸಮಿತಿ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ, ತಾಲ್ಲೂಕು ಕಸಾಪ ಅಧ್ಯಕ್ಷ ಚಂದ್ರಲಿಂಗು, ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಬಿ.ಎಂ. ಅಪ್ಪಾಜಪ್ಪ, ಧನಂಜಯ ದರಸಗುಪ್ಪೆ, ಹೊಳಲು ಶ್ರೀಧರ್, ಸುಜಾತಾ ಕೃಷ್ಣ, ಎಸ್. ನಾರಾಯಣ, ಕಾರಸವಾಡಿ ಮಹದೇವು, ಅರುಣಕುಮಾರಿ, ಕೊತ್ತತ್ತಿ ರಾಜು ಮುಂತಾದವರು ಭಾಗವಹಿಸಿದ್ದರು. 

ನಂತರ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ತಲುಪಿದಾಗ ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಹಲವು ಗಣ್ಯರು ರಥಯಾತ್ರೆಗೆ ಸ್ವಾಗತ ಕೋರಿದರು. 

ನಂತರ ಮುಂದೆ ಸಾಗಿದ ರಥಯಾತ್ರೆ ಸಂಜಯ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಹೊಸಹಳ್ಳಿ, ಮಹಾವೀರ ವೃತ್ತ, ಮೈ ಷುಗರ್ ಫ್ಯಾಕ್ಟರಿ ವೃತ್ತದ ಮೂಲಕ ಮಾಂಡವ್ಯ ಜ್ಞಾನಸಾಗರ ಕ್ಯಾಂಪಸ್ ತಲುಪಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT