ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

2024ರ ಡಿಸೆಂಬರ್‌ನೊಳಗೆ ಕನ್ನಡ ಸಾಹಿತ್ಯ ಸಮ್ಮೇಳನ: ಮಹೇಶ್ ಜೋಶಿ

Published : 29 ನವೆಂಬರ್ 2023, 14:14 IST
Last Updated : 29 ನವೆಂಬರ್ 2023, 14:14 IST
ಫಾಲೋ ಮಾಡಿ
Comments

ಕೆ.ಆರ್.ಪೇಟೆ (ಮಂಡ್ಯ ಜಿಲ್ಲೆ): ‘ರಾಜ್ಯದಲ್ಲಿ ಈ ವರ್ಷ ಬರ ಆವರಿಸಿರುವುದರಿಂದ ಮಂಡ್ಯದಲ್ಲಿ ನಡೆಸಲು ಉದ್ದೇಶಿಸಿದ್ದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ. ಆದರೆ, 2024ರೊಳಗೆ ನಡೆಸಲಾಗುವುದು’ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಮಹೇಶ್ ಜೋಶಿ ಹೇಳಿದರು.

ಪಟ್ಟಣದ ಕೆ.ಪಿಎಸ್ ಶಾಲೆ ಆವರಣದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಬುಧವಾರ ಆಯೋಜಿಸಿದ್ದ ‘ಶಾಲೆಗೊಂದು ಕಾರ್ಯಕ್ರಮ’ದ ಸಮಾರೋಪ ಮತ್ತು ರಾಜ್ಯ ಜಾನಪದ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

‘ಹಾವೇರಿಯಲ್ಲಿ ನಡೆದ ಸಮ್ಮೇಳನದ ಮಾದರಿಯಲ್ಲೇ ಮಂಡ್ಯದಲ್ಲೂ ಅದ್ದೂರಿಯಾಗಿ ಸಮ್ಮೇಳನ ನಡೆಸಲು ಪೂರ್ವಭಾವಿ ಸಭೆಗಳನ್ನೂ ಮಾಡಿದ್ದೆವು. ಆದರೆ, ರಾಜ್ಯದಲ್ಲಿ ಬರಗಾಲವಿದ್ದು, ಕೃಷಿ ಚಟುವಟಿಕೆಗೆ ಹಾಗೂ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿರುವುದರಿಂದ ಜನ ಸಂಕಷ್ಟದಲ್ಲಿದ್ದಾರೆ. ಹೀಗಾಗಿ, ಈ ವರ್ಷ ಸಮ್ಮೇಳನ ನಡೆಸುತ್ತಿಲ್ಲ. ಮುಂದಿನ ವರ್ಷ ಡಿಸೆಂಬರ್‌ನೊಳಗೆ ಜಿಲ್ಲೆಯ ಸಾಹಿತ್ಯಾಸಕ್ತರು, ನಾಗರಿಕರ ಸಹಕಾರ ಪಡೆದು ನೆನಪಿನಲ್ಲಿ ಉಳಿಯುವಂತಹ ಸಮ್ಮೇಳನವನ್ನು ನಡೆಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT