ಮಂಡ್ಯ: ‘2028ರಲ್ಲಿ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ‘ಎನ್ಡಿಎ’ (ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ) ಸರ್ಕಾರ ರಚನೆಯಾಗಲಿದೆ. ಜೆಡಿಎಸ್ ಕೂಡ ಜತೆಗಿರಲಿದೆ. ಯಾರು ಮುಖ್ಯಮಂತ್ರಿಯಾಗಬೇಕು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ತೀರ್ಮಾನಿಸಲಿದ್ದಾರೆ’ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದರು.

ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಮಂಗಳವಾರ ಭೇಟಿ ನೀಡಿ, ಗುರು ಭೈರವೈಕ್ಯ ಮಂದಿರ ಉದ್ಘಾಟನೆಯ ಸಿದ್ಧತೆ ಬಗ್ಗೆ ಮಾಹಿತಿ ಪಡೆದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ‘ಬಿಜೆಪಿಯಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳು ಅನೇಕರು ಇದ್ದಾರೆ. ಪಕ್ಷದ ಆಶೀರ್ವಾದವಿದ್ದರೆ ನಾನು ಕೂಡ ಸಿಎಂ ಆಗಬಹುದು’ ಎಂದರು.

ಈಗ ಅವೆಲ್ಲಕ್ಕಿಂತಲೂ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವುದು ಮುಖ್ಯವಾಗುತ್ತದೆ. ಇದಕ್ಕಾಗಿ ನಾವು ಹೋರಾಟಗಳನ್ನು ಮುಂದುವರಿಸುತ್ತೇವೆ ಎಂದರು.

‘ಮುಖ್ಯಮಂತ್ರಿ ಬದಲಾವಣೆ ನವೆಂಬರ್ನಲ್ಲಿ ಆಗಬೇಕಿತ್ತು. ಈಗ ಆ ದಿನಾಂಕ ಮುಗಿದುಹೋಗಿದೆ. ಡಿ.ಕೆ. ಶಿವಕುಮಾರ್ ಅವರು ಮಲ್ಲಿಕಾರ್ಜುನ್ ಖರ್ಗೆಯವರ ಮನೆಗೆ ಹೋಗಿ ಗಲಾಟೆ ಮಾಡಿದ್ದಾರೆ. ಈ ಜಗಳದಲ್ಲೇ ಸರ್ಕಾರ ಸತ್ತು ಹೋಗಿದೆ. ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಗೌರವ ಇದ್ದಿದ್ದರೆ ಶಾಸಕರು ದೆಹಲಿಗೆ ಹೋಗುತ್ತಿರಲಿಲ್ಲ. ಡಿ.ಕೆ. ಶಿವಕುಮಾರ್ ಧ್ವನಿಗೆ ಮೂರು ಪೈಸೆಯ ಬೆಲೆಯನ್ನು ಶಾಸಕರು ನೀಡುತ್ತಿಲ್ಲ’ ಎಂದು ದೂರಿದರು.

ಕಾಂಗ್ರೆಸ್ನಲ್ಲಿ ಸಿಎಂ ಆಸೆ ಇಟ್ಟುಕೊಂಡವರು ಜಗಳವಾಡುತ್ತಿದ್ದಾರೆ. ಈ ನಡುವೆ ರಾಜ್ಯದ ಅಭಿವೃದ್ಧಿ ನಡೆಯುತ್ತಿಲ್ಲ. ಹಿಂದೆ ಜನತಾದಳವನ್ನು ‘ಜಗಳಗಳ ಪಾರ್ಟಿ’ ಎಂದು ಕರೆಯುತ್ತಿದ್ದರು. ಅದೇ ರೀತಿ ಈಗ ಕಾಂಗ್ರೆಸ್ ‘ಜಗಳಗಳ ಪಾರ್ಟಿ’ ಆಗಿದೆ ಎಂದು ವ್ಯಂಗ್ಯವಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.