ಮಂಗಳವಾರ, ಜೂನ್ 15, 2021
21 °C

ಮೇಷ್ಟ್ರು ಎಂದೇ ಖ್ಯಾತರಾಗಿದ್ದ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಇನ್ನಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಮೇಷ್ಟ್ರು ಎಂದೇ ಖ್ಯಾತರಾಗಿದ್ದ ಮಾಜಿ ಸ್ಪೀಕರ್‌ ಕೆ.ಆರ್‌.ಪೇಟೆ ಕೃಷ್ಣ (80) ಅವರು ಅನಾರೋಗ್ಯದಿಂದ ಮೈಸೂರಿನ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾದರು.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇತ್ತೀಚೆಗಷ್ಟೇ ಮೈಸೂರಿಗೆ ಮರಳಿದ್ದರು. ಅವರಿಗೆ ಪತ್ನಿ, ಪುತ್ರಿ ಇದ್ದಾರೆ.

ಅವರ ಹುಟ್ಟೂರು, ಕೆ.ಆರ್‌.ಪೇಟೆ ತಾಲ್ಲೂಕು, ಸಂತೇಬಾಚಹಳ್ಳಿ ಹೋಬಳಿ ಕೊತ್ತಮಾರನಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವಕೀಲರಾಗಿ ಖ್ಯಾತರಾಗಿದ್ದ ಅವರು ಜನತಾ ಪರಿವಾರದಿಂದ ತಾಲ್ಲೂಕು ಬೋರ್ಡ್‌ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ್ದರು.

 ಕೆ.ಆರ್‌.ಪೇಟೆ ಕ್ಷೇತ್ರದಿಂದ 1985 (ಜನತಾ ದಳ),1994 (ಜನತಾ ಪಕ್ಷ), 2004 (ಜೆಡಿಎಸ್‌) ರಲ್ಲಿ ಶಾಸಕರಾಗಿದ್ದರು. ಎಸ್‌.ಆರ್‌.ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವರಾಗಿ ಕೆಲಸ ಮಾಡಿದ್ದರು.

 2008ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದರು. 2013ರಲ್ಲಿ ಕಾಂಗ್ರೆಸ್ ಸೇರಿ ನಂತರ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.

1996ರಲ್ಲಿ  ಮಂಡ್ಯ ಜಿಲ್ಲೆಯ ಸಂಸದರಾಗಿದ್ದರು. ಬಿಜೆಪಿ– ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಕೃಷ್ಣ ಸ್ಪೀಕರ್‌ ಆಗಿದ್ದರು. ವಿಧಾನಸಭಾ ಕಲಾಪವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿ ‘ಮೇಷ್ಟ್ರು’ ಎಂದೇ ಪ್ರಸಿದ್ಧಿ ಪಡೆದಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು