ಮಂಡ್ಯ: ಲೋಕಾಯುಕ್ತ ಪೊಲೀಸರು ನಗರದ ಲೋಕೋಪಯೋಗಿ ಇಲಾಖೆ ಕಚೇರಿಗೆ ಸೋಮವಾರ ದಾಳಿ ನಡೆಸಿ ನಾಲ್ಕೂವರೆ ಗಂಟೆ ಕಡತಗಳ ಪರಿಶೀಲನೆ ನಡೆಸಿದ್ದಾರೆ.

ಕಾಮಗಾರಿ ಮಾಡಿರುವ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ತಾರತಮ್ಯ ಮಾಡಲಾಗುತ್ತಿದೆ ಎನ್ನುವ ದೂರಿನ ಮೇರೆಗೆ ದಾಳಿ ನಡೆಸಿದ್ದಾರೆ.

ಮುಖ್ಯವಾಗಿ ಸೀನಿಯಾರಿಟಿ ನಿಯಮ ಉಲ್ಲಂಘಿಸಲಾಗುತ್ತಿದೆ. 2021ರಲ್ಲಿ ಮಾಡಿರುವ ಕಾಮಗಾರಿಗೆ ಬಿಲ್ ಬಿಡುಗಡೆ ಮಾಡಿಲ್ಲ. ಬದಲಿಗೆ 2024ರಲ್ಲಿ ಮಾಡಿರುವ ಕಾಮಗಾರಿಯ ಹಣವನ್ನು ಬಿಡುಗಡೆ ಮಾಡುವ ಮೂಲಕ ವಂಚಿಸಲಾಗುತ್ತಿದೆ ಎಂದು ಆರೋಪಿಸಿ ಹಲವು ಗುತ್ತಿಗೆದಾರರು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನ 3.30ರಿಂದ ರಾತ್ರಿ 8 ಗಂಟೆವರೆಗೂ ಪರಿಶೀಲನೆ ನಡೆಸಿ ಕೆಲವೊಂದು ಮುಖ್ಯವಾದ ಕಡತಗಳನ್ನು ತೆಗೆದುಕೊಳ್ಳಲಾಗಿದೆ. ಮಾತ್ರವಲ್ಲದೆ ಕಚೇರಿಗೆ ಬೀಗ ಹಾಕಿಸಿ, ಮಂಗಳವಾರವೂ ಪರಿಶೀಲನೆ ಮುಂದುವರಿಯಲಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಎಸ್ಪಿ ಸುರೇಶ್ಬಾಬು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಸುನೀಲ್ ಕುಮಾರ್, ಇನ್ಸ್ಪೆಕ್ಟರ್ಗಳಾದ ಬ್ಯಾಟರಾಯಗೌಡ, ಜಯರತ್ನಾ, ಸಿಬ್ಬಂದಿ ಶಂಕರ್, ಶರತ್, ಮಹದೇವ, ಮಹದೇವಸ್ವಾಮಿ, ನವೀನ, ಮನು, ರಾಮಲಿಂಗ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.