ಶನಿವಾರ, ಮಾರ್ಚ್ 25, 2023
29 °C

ಕುಮಾರಸ್ವಾಮಿ ಸುಳ್ಳುಗಳಿಗೆ ಉತ್ತರ ಕೊಡಲ್ಲ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ‘ಎಚ್‌.ಡಿ.ಕುಮಾರಸ್ವಾಮಿ ಅವರು ಎಲ್ಲದಕ್ಕೂ ಸುಳ್ಳು ಹೇಳುತ್ತಾರೆ. ಹೀಗಾಗಿ ನಾನು ಅವರ ಸುಳ್ಳುಗಳಿಗೆ ಉತ್ತರ ಕೊಡುವುದಿಲ್ಲ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ಹೇಳಿದರು.

ದಲಿತರು ಮುಖ್ಯಮಂತ್ರಿಯಾಗುವುದನ್ನು ಸಿದ್ದರಾಮಯ್ಯ ತಪ್ಪಿಸಿದ್ದಾರೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಅವರು ಉತ್ತರ ನೀಡಿದರು.

‘ಮಂಡ್ಯ ಹಾಲು ಒಕ್ಕೂಟದಲ್ಲಿ ನಡೆದಿರುವ ಹಾಲಿಗೆ ನೀರು ಮಿಶ್ರಣ ಮಾಡಿದ ಪ್ರಕರಣವನ್ನು ಸಿಐಡಿ ತನಿಖೆ ವಹಿಸುವಂತೆ ನಾವು ಒತ್ತಾಯ ಮಾಡಿದ್ದೆವು. ಅದರಂತೆ ಸಿಐಡಿ ತನಿಖೆಗೆ ಆದೇಶ ನೀಡಲಾಗಿದೆ. ಆದಷ್ಟು ಬೇಗ ವಿಚಾರಣೆ ಮುಗಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು’ ಎಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು