ಮಂಡ್ಯ: ಹೊಸದಾಗಿ ಮೂರು ಕರ್ನಾಟಕ ಪಬ್ಲಿಕ್ ಶಾಲೆಗಳು ನನ್ನ ಕ್ಷೇತ್ರಕ್ಕೆ ಮಂಜೂರಾಗಿವೆ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.

ನಗರದ ಗುತ್ತಲು ಬಡಾವಣೆಯ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಗುರುವಾರ ನಡೆದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಂಡ್ಯ ತಾಲ್ಲೂಕಿನ ಉಮ್ಮಡಹಳ್ಳಿ, ಚಿಕ್ಕಮಂಡ್ಯ, ಬೇಬಿ ಗ್ರಾಮಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆಗಳು ಮಂಜುರಾಗಿವೆ. ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಧನ್ಯವಾದ ತಿಳಿಸುವೆ. ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬಿಇಒ ಮಹದೇವು ಮಾತನಾಡಿದರು. ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯೆ ಸೌಭಾಗ್ಯ, ಪ್ರಾಂಶುಪಾಲ ಶಿವರಾಂ, ಮುಖ್ಯ ಶಿಕ್ಷಕಿ ಪೂರ್ಣಿಮಾ, ಎಸ್ಡಿಎಂಸಿ ಅಧ್ಯಕ್ಷ ಶಿವರುದ್ರ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.