ಕೆ.ಆರ್.ಪೇಟೆ: ಪಟ್ಟಣದ ಕೃಷ್ಣ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ರಂಗೋಲಿ ಸ್ಪರ್ಧೆ ಸಂಭ್ರಮದಿಂದ ನಡೆಯಿತು.

ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರತಿಮಾ ಉದ್ಘಾಟಿಸಿ ಮಾತನಾಡಿ, ‘ಕನ್ನಡಿಗರು ತೋರಿಕೆಗಾಗಿ ನವೆಂಬರ್ ಕನ್ನಡಿಗರಾಗದೆ ಕನ್ನಡ ನೆಲ, ಜಲ, ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಸ್ವಾಭಿಮಾನ ಬೆಳೆಸಿಕೊಂಡು ವರ್ಷಪೂರ್ತಿ ಕನ್ನಡಿಗರಾಗುವ ಮೂಲಕ ಕನ್ನಡಿಗನೆಂಬ ಅಸ್ಮಿತೆಯನ್ನು ಪ್ರದರ್ಶಿಸಬೇಕು’ ಎಂದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದ ರಾಜ್ಯ ಆರ್.ಟಿ.ಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿ,‘ ತಾಂತ್ರಿಕ ಶಿಕ್ಷಣವನ್ನು ವ್ಯಾಸಂಗ ಮಾಡುತ್ತಿರುವ ನೀವು ನಮ್ಮ ನೆಲದ ಇತಿಹಾಸದ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಅನ್ಯ ಭಾಷಿಕರಿಗೆ ಕನ್ನಡ ಕಲಿಸಿಕೊಡುವ ಕೆಲಸ ಮಾಡಬೇಕು’ ಎಂದು’ ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಕೆ.ಆರ್.ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ , ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರಾದ ರುದ್ರೇಶ್, ನಾಗಪ್ಪ ಭಜಂತ್ರಿ, ಅರುಣ ಕುಮಾರ್, ಹರೀಶ್, ನಂದೀಶ್, ಕಾಲೇಜಿನ ರಿಜಿಸ್ಟ್ರಾರ್ ಮಂಜುನಾಥ್ ಉಪಾಧ್ಯಾಯ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿದ್ಯಾರ್ಥಿನಿ ಹೊಸಹೊಳಲು ದೀಪ್ತಿ ಮತ್ತು ತಂಡದವರು ಪ್ರದರ್ಶಿಸಿದ ಭರತನಾಟ್ಯ ಪ್ರದರ್ಶನವು ಗಮನ ಸೆಳೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.