ಗುರುವಾರ , ಮೇ 26, 2022
30 °C

ಕಸಾಪ ‘ಸಾಂಸ್ಕೃತಿಕ’ ಪರಿಷತ್ತಾಗಲಿ: ದೊಡ್ಡರಂಗೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ‘ಶತಮಾನ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತು ಕೇವಲ ಸಾಹಿತ್ಯಕ್ಕಷ್ಟೇ ಸೀಮಿತವಾಗಬಾರದು. ಕನ್ನಡ ನಾಡಿನ ಸಮಗ್ರ ಪರಿಕಲ್ಪನೆಯೊಂದಿಗೆ ಕನ್ನಡ ಸಾಂಸ್ಕೃತಿಕ ಪರಿಷತ್ತು ಎಂದು ಬದಲಾಗಬೇಕು’ ಎಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಪ್ರೊ.ದೊಡ್ಡರಂಗೇಗೌಡ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ 18ನೇ ಸಾಹಿತ್ಯ ಸಮ್ಮೇಳನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಕನ್ನಡ ಸಂಸ್ಕೃತಿಯನ್ನು ಪುನರುತ್ಥಾನಗೊಳಿಸುವ ಕಾರ್ಯ ಎಲ್ಲಾ ರಂಗದಲ್ಲೂ ನಡೆಯುತ್ತಿದೆ. ಹೋರಾಟ, ಸಂಘಟನೆಗಳು ರಾಜ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಅತ್ಯಂತ ಹಳೆಯ ಸಂಘಟನೆಯಾಗಿರುವ ಸಾಹಿತ್ಯ ಪರಿಷತ್ತು ಈ ಎಲ್ಲಾ ಚಟುವಟಿಕೆಗಳನ್ನು ಒಳಗೊಳ್ಳುವಂತಾಗಬೇಕು, ಎಲ್ಲಾ ಕ್ಷೇತ್ರಕ್ಕೂ ನ್ಯಾಯ ಒದಗಿಸಬೇಕು. ಹೀಗಾಗಿ ಸಾಂಸ್ಕೃತಿಕ ಪರಿಷತ್ತು ಎಂದು ಬದಲಾದರೆ ಒಳ್ಳೆಯದು’ ಎಂದರು.

‘ದೊಡ್ಡ ನಗರಗಳಲ್ಲಿ ಕನ್ನಡ ಭಾಷೆ ಮರೆಯಾಗುತ್ತಿದೆ. ಇಂಗ್ಲಿಷ್‌ ಮಾತ್ರ ಅನ್ನ ನೀಡುವ ಭಾಷೆಯಾಗಿದೆ ಎಂಬ ಭ್ರಮೆ ಸೃಷ್ಟಿಯಾಗಿದೆ. ಗುಲಾಮಗಿರಿಯ ಸಂಕೇತ ಎಂಬಂತೆ ಬ್ರಿಟಿಷರು ಬಿಟ್ಟು ಹೋಗಿರವ ಇಂಗ್ಲಿಷ್‌ ಭಾಷೆಯನ್ನು ಢಾಳಾಗಿ ಬಳಸುತ್ತಿದ್ದೇವೆ’ ಎಂದರು.

‘7ನೇ ತರಗತಿವರೆಗೆ ಕನ್ನಡವನ್ನು ಕಡ್ಡಾಯವಾಗಿ ಕಲಿಸುವ ಶಿಕ್ಷಣ ನೀತಿಯ ಅವಶ್ಯಕತೆ ಇದೆ. ಒಂದು ಭಾಷೆಯಾಗಿ ಯಾವುದೇ ಭಾಷೆ ಕಲಿತರೂ ತೊಂದರೆ ಇಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಅಗ್ರಮಾನ್ಯವಾಗಬೇಕು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು