ಕೆಆರ್ ಎಸ್ (ಮಂಡ್ಯ): ನದಿಗಳಿಗೆ ನಮನ ಸಲ್ಲಿಸುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರುವ ವಾಡಿಕೆ. ಪ್ರಕೃತಿಯನ್ನು ಪೂಜಿಸಿ ಆರಾಧಿಸುವುದು ನಮ್ಮ ಸಂಸ್ಕೃತಿಯ ಪ್ರತೀಕ. ಅದೇ ರೀತಿ ಕಾವೇರಿ ಸನ್ನಿಧಿಯಲ್ಲಿ ಕಾವೇರಿಗೆ ನಮನ ಸಲ್ಲಿಸುವ ಕಾರ್ಯವನ್ನು ಸರ್ಕಾರ ಹಮ್ಮಿಕೊಂಡಿದೆ ಎಂದು ಮೈಸೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಮುಕ್ತಿದಾನಂದ ಸ್ವಾಮೀಜಿ ಹೇಳಿದರು.

ಕೆಆರ್ಎಸ್ ಬೃಂದಾವನ ಉದ್ಯಾನದಲ್ಲಿ ಭಾನುವಾರ ಏರ್ಪಡಿಸಿದ್ದ ಕಾವೇರಿ ಆರತಿಯ ಮೂರನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿ, ನಮಗೆ ಅನ್ನ ಕೊಡುವ ಮಾತೆಗೆ ಶ್ರದ್ಧೆಯಿಂದ ನಮಿಸಿ ಅವಳ ಕೃಪೆಗೆ ಪಾತ್ರರಾಗುವ ಅವಕಾಶ ಸಿಕ್ಕಿದೆ. ಇದೊಂದು ಪವಿತ್ರ ಕಾರ್ಯ ಎಂದರು.

ಕಾವೇರಿ ಆರತಿ ದಸರಾ ಹಬ್ಬದ ಮುಖ್ಯ ಅಂಗವಾಗಬೇಕೆಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಭಿಲಾಷೆಯಂತೆ ಕಾವೇರಿ ಆರತಿಯನ್ನು ಆಯೋಜಿಸಲಾಗಿದೆ. ದಕ್ಷಿಣ ಕರ್ನಾಟಕದ ಜೀವನದಿ, ಕೋಟ್ಯಂತರ ಜನರ ದಾಹ ನೀಗಿಸುವ ರೈತರ ಬಾಳು ಬೇಳಗುವ ಈ ಜೀವನದಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು ಎಂದು ಅಭಿಪ್ರಾಯಪಟ್ಟರು.

ವಿರೋಧಿಸುವವರು ಕೂಡ ಮನಸು ಬದಲಿಸಲಿದ್ದಾರೆ: ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, ಕಾವೇರಿ ಆರತಿಯನ್ನು ಕೆಲವರು ವಿರೋಧಿಸಿ ಕೋರ್ಟ್ ಗೆ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ವಿರೋಧಿಸುವವರು ಕೂಡ ಮನಸ್ಸು ಬದಲಿಸಲಿದ್ದಾರೆ. ಕಾವೇರಿ ಆರತಿಗೆ ಎಲ್ಲರೂ ಪ್ರೀತಿಯಿಂದ ಬೆರೆಯೋಣ, ಅನುಬಂಧ ಬೆಸೆಯೋಣ ಎಂದು ಹೇಳಿದರು.

ಗಂಗೆಯನ್ನು ಸಂತೃಪ್ತಿಗೊಳಿಸಲು ಉತ್ತರದಲ್ಲಿ ‘ಗಂಗಾ ಆರತಿ’ ಮಾಡುತ್ತಿರುವಂತೆ ಕರ್ನಾಟಕದ ಜೀವನದಿ ಕಾವೇರಿಗೆ ನಮಿಸಿ ವಂದಿಸಬೇಕು. ಕೆಆರ್ ಎಸ್ ನಲ್ಲಿ ಕಾವೇರಿ ಆರತಿ ಆಯೋಜಿಸಬೇಕೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತೀರ್ಮಾನಿಸಿದರು. ಆದರೆ ಕೆಲವರು ಇದನ್ನು ವಿರೋಧಿಸಿ ಕೋರ್ಟ್ ಗೆ ಹೋದರು. ಸದ್ಯ ಈ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಸಾಂಕೇತಿಕವಾಗಿ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಸ್ವಾಮೀಜಿ, ಶ್ರೀರಂಗಪಟ್ಟಣ ಶಾಸಕರಾದ ರಮೇಶ ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್, ಜಿಲ್ಲಾಧಿಕಾರಿ ಕುಮಾರ್, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರವಾಸಿಗರ ದಂಡು: ಸೆ.26ರಿಂದ ಕೆಆರ್ ಎಸ್ ನ ಬೃಂದಾವನದಲ್ಲಿ ಸಾಂಕೇತಿಕವಾಗಿ ಆರಂಭವಾಗಿರುವ ‘ಕಾವೇರಿ ಆರತಿ’ ಕಾರ್ಯಕ್ರಮದ ಮೂರನೇ ದಿನವೂ ಜನಸಾಗರವೇ ಹರಿದುಬಂದಿತ್ತು.

ಕಾವೇರಿ ಆರತಿಯಂತಹ ಧಾರ್ಮಿಕ ಆಚರಣೆ ಜೊತೆಗೆ ಮಂಡ್ಯದ ಸೊಗಡನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು, ಖ್ಯಾತ ಕಲಾವಿದರ ಗಾಯನ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದುಕೊಟ್ಟವು.

ಕಾವೇರಿ ಆರತಿ ಪೂಜಾ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು, ಲೇಸರ್ ಶೋ, ಗಾಯಕಿ ಎಂ.ಡಿ.ಪಲ್ಲವಿ, ಲಕ್ಷ್ಮಿ ನಾಗರಾಜ್, ಇಂದು ನಾಗರಾಜ್ ಅವರಿಂದ ಗಾನಸುಧೆ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.