ಮಂಡ್ಯ: ವಿವಿಧ ಸಂಘಟನೆಗಳ ಧರಣಿ, ಚಳವಳಿಗಳ ನಡುವೆಯೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುವುದನ್ನು ನಿರಂತರವಾಗಿ ಮುಂದುವರಿಸಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲಿಸುತ್ತಿರುವ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನಿತ್ಯವೂ ಸರಾಸರಿ 7 ಸಾವಿರ ಕ್ಯುಸೆಕ್ ನೀರು ಹರಿಬಿಟ್ಟಿದ್ದಾರೆ.

ಬರ ಪರಿಸ್ಥಿತಿಯಲ್ಲಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಮಂಡ್ಯ ಮಾತ್ರವಲ್ಲದೇ ಅಕ್ಕಪಕ್ಕದ ಮೈಸೂರು, ಚಾಮರಾಜನಗರ, ಹಾಸನ ಜಿಲ್ಲೆಗಳಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿವೆ. ಜೊತೆಗೆ ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಪಕ್ಷಗಳೂ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿವೆ. ಹೋರಾಟಕ್ಕೆ ಕ್ಯಾರೆ ಎನ್ನದ ರಾಜ್ಯ ಸರ್ಕಾರ ನೀರು ಹರಿಸುವುದನ್ನು ಮುಂದುವರಿಸಿದೆ.

ಜೆಡಿಎಸ್ ಮೆರವಣಿಗೆ: ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ತಕ್ಷಣವೇ ನೀರು ನಿಲ್ಲಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ಮುಖಂಡರು ಶನಿವಾರ ಸಿಲ್ವರ್ ಜ್ಯೂಬಿಲಿ ಉದ್ಯಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ಮೆರವಣಿಗೆ ನಡೆಸಿದರು.

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ ‘ಸರ್ಕಾರಕ್ಕೆ ರೈತರ ಹಿತಕ್ಕಿಂತ ಗ್ಯಾರಂಟಿ ಯೋಜನೆಗಳ ಜಾರಿಯೇ ಮುಖ್ಯವಾಗಿದೆ. ಸುಪ್ರೀಂ ಕೋರ್ಟ್ ಆದೇಶ ನೀಡದಿದ್ದರೂ ತಮಿಳುನಾಡಿಗೆ ನೀರು ಬಿಟ್ಟ ಕಾಂಗ್ರೆಸ್ ಸರ್ಕಾರ ರೈತರಿಗೆ ದ್ರೋಹವೆಸಗಿದೆ. ನೀರು ನಿಲ್ಲಿಸಿ ರೈತರನ್ನು ಉಳಿಸಬೇಕು. ನೀರು ನಿಲ್ಲಿಸಿದರೆ ನಿಮ್ಮನ್ನು ಜೈಲಿಗೆ ಹಾಕುತ್ತಾರಾ, ನಾವೂ ಕೂಡ ನಿಮ್ಮ ಜೊತೆಗೆ ಜೈಲಿಗೆ ಬರುತ್ತೇವೆ. ಮೊದಲು ನೀರು ನಿಲ್ಲಿಸಿ ರೈತರನ್ನು ಉಳಿಸಬೇಕು’ ಎಂದು ಒತ್ತಾಯಿಸಿದರು.

‘ರೈತರು ಉಳಿದರೆ ಮಾತ್ರ ಅನ್ನ ಸಿಗುತ್ತದೆ. ಬೆಳಿಗ್ಗೆ ಎದ್ದರೆ ಗ್ಯಾರಂಟಿ ಯೋಜನೆ ಬಗ್ಗೆಯೇ ನಿಮಗೆ ಚಿಂತೆ. ಇದನ್ನು ಬಿಟ್ಟು ಸರ್ಕಾರ ರೈತರ ಬಗ್ಗೆ ಕಾಳಜಿ ವಹಿಸಬೇಕು. ಗ್ಯಾರಂಟಿ ಯೋಜನೆಯಲ್ಲಿ ₹ 2 ಸಾವಿರ ಕೊಟ್ಟು, ಲಿಕ್ಕರ್ ದರ ಹೆಚ್ಚಳ ಮಾಡಿದ್ದೀರಿ, ನಿತ್ಯ ₹ 20 ಹೆಚ್ಚು ಹಣ ಕೊಟ್ಟು ಮದ್ಯ ಖರೀದಿಸುತ್ತಾರೆ. ತಿಂಗಳಿಗೆ ₹ 3 ಸಾವಿರ ಆಗುತ್ತೆ, ನೀವು ಕೊಡುತ್ತಿರುವುದು ಮಹಿಳೆಯರಿಗೆ ₹ 2 ಸಾವಿರ. ಹೆಚ್ಚುವರಿ ಹಣ ಅವರ ಕುಟುಂಬಕ್ಕೆ ಹೊರೆಯಾಗುವುದಿಲ್ಲವೇ’ ಎಂದು ಪ್ರಶ್ನಿಸಿದರು.

‘ಮಾಜಿ ಪ್ರಧಾನಿ ಮಂತ್ರಿ ಎಚ್.ಡಿ.ದೇವೇಗೌಡ ಅವರು ವರುಣದೇವನಿಗಾಗಿ ಮನೆದೇವರಾದ ರಂಗನಾಥಸ್ವಾಮಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ. ಮತ್ತೊಂದೆಡೆ ಹೋರಾಟ ಮಾಡುವಂತೆ ನಮಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಲವು ಖಾತೆ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆದರೆ, 15 ಸಾವಿರ ಕ್ಯುಸೆಕ್ ಕೇಳಿದ್ದಾರೆ, ನಾವು ಕೇವಲ 5 ಸಾವಿರ ಕ್ಯುಸೆಕ್ ಬಿಡುತ್ತಿದ್ದೇವೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ’ ಎಂದರು.

ಮುಖಂಡ ಡಿ.ಸಿ.ತಮ್ಮಣ್ಣ ಮಾತನಾಡಿ ‘ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು 1962ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ 63ರಲ್ಲಿ ನೀರಿನ ವಿಚಾರದಲ್ಲಿ ಉತ್ತಮ ನಿರ್ಣಯ ಕೈಗೊಂಡರು. 1985ರಲ್ಲಿ ಇಗ್ಗಲೂರು ಬ್ಯಾರೇಜ್ ನಿರ್ಮಿಸಿ ನೀರಾವರಿಗೆ ಒತ್ತು ನೀಡಿದರು. ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ 14.71 ಟಿಎಂಸಿ ಅಡಿ ನೀರು ಉಳಿಸಿಕೊಟ್ಟರು. ತಮಿಳುನಾಡಿನ ಡಿಎಂಕೆ ಬೆಂಬಲವಿದ್ದರೂ ಪ್ರಧಾನಿಯಾಗಿದ್ದ ವೇಳೆ ಬೆಂಗಳೂರಿನ ಜನರ ಕುಡಿಯುವ ಆದ್ಯತೆಗೆ 10 ಟಿಎಂಸಿ ಅಡಿ ಕೊಟ್ಟರು, ಆದರೆ ಈ ವಿಚಾರದಲ್ಲಿ ಕಾಂಗ್ರೆಸ್ ಕೊಡುಗೆ ಏನು’ ಎಂದು ಪ್ರಶ್ನಿಸಿದರು.

‘ಕಳೆದ ಎರಡು ವರ್ಷಗಳಲ್ಲಿ 600 ಟಿಎಂಸಿ ಅಡಿ ನೀರು ಸಮುದ್ರಕ್ಕೆ ವ್ಯರ್ಥವಾಗಿ ಹರಿದುಹೋಗಿದೆ. ನೀರು ಹೆಚ್ಚಾದಾಗ ಹಿಡಿದಿಟ್ಟುಕೊಳ್ಳಲು ಮೆಕೆದಾಟು ಯೋಜನೆ ರೂಪಿಸಿದ್ದರೂ ಅದಕ್ಕೆ ತಮಿಳುನಾಡಿನವರು ಕ್ಯಾತೆ ತೆಗೆಯುತ್ತಾರೆ. ಕಾವೇರಿ ನದಿ ನೀರಿನ ಹಂಚಿಕೆ ನಂತರ ಸಂಕಷ್ಟ ಸಮಯದಲ್ಲಿ ಏನು ಮಾಡಬೇಕು ಎಂಬ ಬಗ್ಗೆ ಯಾವುದೇ ತೀರ್ಪು ಪ್ರಕಟಿಸಿಲ್ಲ. ನ್ಯಾಯಾಧೀಕರಣದಿಂದ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ ರೈತರನ್ನು ಕಾಪಾಡಬೇಕು’ ಎಂದು ಆಗ್ರಹಿಸಿದರು.

ಮುಖಂಡ ಸಿ.ಎಸ್.ಪುಟ್ಟರಾಜು ಮಾತನಾಡಿ, ‘ರಾಜ್ಯವನ್ನಾಳಿದ ಸರ್ಕಾರಗಳಿಗೆ ನೆಲ, ಜಲದ ಬಗ್ಗೆ ಕಾಳಜಿ ಇಲ್ಲ, ಕಾವೇರಿ ವಿಚಾರದಲ್ಲಿ ತಮಿಳುನಾಡಿನವರು ಒಂದು ತಿಂಗಳ ಮುನ್ನ ಕಾವೇರಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸುತ್ತಾರೆ. ತೀರ್ಪು ಬಂದ ನಂತರ ರಾಜ್ಯ ಸರ್ಕಾರ ಪ್ರಾಧಿಕಾರದ ಕಚೇರಿಯ ಹುಡುಕಾಟ ನಡೆಸುತ್ತದೆ. ಇಂತಹ ದಯನೀಯ ಸ್ಥಿತಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಇದೆ’ ಎಂದು ವ್ಯಂಗ್ಯವಾಡಿದರು.

ಶಾಸಕ ಎಚ್.ಟಿ.ಮಂಜು, ಮುಖಂಡರಾದ ರವೀಂದ್ರ ಶ್ರೀಕಂಠಯ್ಯ, ಕೆ.ಅನ್ನದಾನಿ, ಕೆ.ಸುರೇಶ್ಗೌಡ, ಕೆ.ಟಿ.ಶ್ರೀಕಂಠೇಗೌಡ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್, ಬಿ.ಆರ್.ರಾಮಚಂದ್ರ, ರಘುನಂದನ್ ಇದ್ದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಸಮುದ್ರಕ್ಕೆ ಹರಿಯುವ ನೀರು ತಡೆಯುವವರು ಯಾರು? ಯಾವಾಗಲೂ ಕ್ಯಾತೆ ತೆಗೆಯುವ ತಮಿಳುನಾಡು

ಕೇಂದ್ರದ ಗುಲಾಮರಾದ ಸಂಸದರು: ಮುಖ್ಯಮಂತ್ರಿ ಚಂದ್ರು ಮಂಡ್ಯ: ‘ರಾಜ್ಯದ ಸಂಸದರು ಕೇಂದ್ರದ ಬಳಿ ದನಿ ಎತ್ತದೆ ಸುಮ್ಮನಿದ್ದಾರೆ. ಬಿಜೆಪಿ ಸಂಸದರು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಎದುರು ಗುಲಾಮರಾಗಿದ್ದಾರೆ. ಮೇಕೆದಾಟು ಪಾದಯಾತ್ರೆ ಮಾಡಿದ ಕಾಂಗ್ರೆಸ್ ಸಂಸದ ಸದ್ದು ಮಾಡುತ್ತಿಲ್ಲ’ ಎಂದು ಅಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ನಡೆಸುತ್ತಿರುವ ಧರಣಿಗೆ ಬೆಂಬಲ ನೀಡಿ ಅವರು ಶನಿವಾರ ಮಾತನಾಡಿದರು. ‘ಕಾವೇರಿ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳ ಅಧಿಕಾರದಾಹದಿಂದ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ಕನ್ನಡ ನಾಡಿಗೆ ಅನ್ಯಾಯವಾಗಿ ಜಲಾಶಯಗಳು ಬರಿದಾಗುತ್ತಿದ್ದರೂ ಮಂಡ್ಯದಲ್ಲಿ ಗೆದ್ದಿರುವ ಪಕ್ಷೇತರ ಸಂಸದೆ ಸುಮಲತಾ ಅಧಿಕಾರಕ್ಕಾಗಿ ಎಲ್ಲ ಪಕ್ಷಗಳ ಜತೆ ಸಂಬಂಧ ಸುಧಾರಿಸಿಕೊಳ್ಳಲು ಮುಂದಾಗಿ ಊಸರವಳ್ಳಿ ನಾಟಕ ವಾಡುತ್ತಿದ್ದಾರೆ. ಕಾವೇರಿ ನೀರಿಗಾಗಿ ಅಂಬರೀಷ್ ರಾಜೀನಾಮೆ ನೀಡಿದ್ದರು ಅದನ್ನು ಸಂಸದೆ ನೆನಪು ಮಾಡಿಕೊಳ್ಳಲಿ’ ಎಂದರು. ‘ರಾಜ್ಯದ ಶಾಸಕರು ಸಹ ಕಾವೇರಿ ವಿಚಾರದಲ್ಲಿ ಸುಮ್ಮನಿದ್ದಾರೆ ತಮ್ಮದೇ ಸರ್ಕಾರವನ್ನು ಪ್ರಶ್ನೆ ಮಾಡುತ್ತಿಲ್ಲ ರೈತರ ಹಿತ ಕಾಪಾಡಲು ಮುಂದಾಗುತ್ತಿಲ್ಲ. ಮತ್ತೊಂದೆಡೆ ಗ್ಯಾರಂಟಿ ಹೆಸರಿನಲ್ಲಿ ಸಂಭ್ರಮ ಮಾಡಿದ್ದಾರೆ ಕಾವೇರಿ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೋರಾಟ ಮಾಡಬೇಕಾಗಿತ್ತು. ಆದರೆ ನ್ಯಾಯಾಲಯಕ್ಕೆ ಹೆದರಿ ನೀರು ಬಿಡಬೇಕಾದ ಪರಿಸ್ಥಿತಿ ಇದೆ ಎನ್ನುವ ಸರ್ಕಾರ ರಾಜ್ಯದ ಜನತೆಗೆ ಹೆದರುವುದಿಲ್ಲ ಎಂದರೆ ಏನರ್ಥ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.