ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾರ್ಕಾಲು ದೇವರಾಜುಗೆ ‘ಕಾಯಕರತ್ನ ಪ್ರಶಸ್ತಿ’

Published 9 ಜುಲೈ 2024, 14:29 IST
Last Updated 9 ಜುಲೈ 2024, 14:29 IST
ಅಕ್ಷರ ಗಾತ್ರ

ಮಂಡ್ಯ: ಮಳವಳ್ಳಿ ತಾಲ್ಲೂಕಿನ ಮಾರ್ಕಾಲು ಗ್ರಾಮದ ಅಂತರರಾಷ್ಟ್ರೀಯ ಚಿತ್ರ ಕಲಾವಿದ ದೇವರಾಜು ಮಾರ್ಕಾಲು ಅವರು ರಾಜ್ಯ ಕಾಯಕರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ಗುರುಮೂರ್ತಿ ಹೇಳಿದರು.

ಜು.13ರಂದು ಬೀದರ್‌ನ ಸಿದ್ಧಾರೂಢ ಮಠದಲ್ಲಿ 2024ನೇ ಸಾಲಿನ ರಾಜ್ಯ ಕಾಯಕ ಪ್ರಶಸ್ತಿ ಸಮಾರಂಭ ನಡೆಯಲಿದ್ದು, ಸಮಾರಂಭದಲ್ಲಿ ಚಿತ್ರಕಲಾವಿದ ದೇವರಾಜು ಮಾರ್ಕಾಲು ಅವರಿಗೆ ಪ್ರದಾನ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.

ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಚಿಕ್ಕರಸಿನಕೆರೆ ಶಿವಲಿಂಗಯ್ಯ, ಮಹಿಳಾ ಉಪಾಧ್ಯಕ್ಷೆ ಪುಷ್ಪಲತಾ, ನಿರ್ದೇಶಕರಾದ ಜಯರಾಮು, ವೆಂಕಟಾಚಲಯ್ಯ ಇದ್ದರು.

‘ಡೆಂಗಿ ನಿಯಂತ್ರಣಕ್ಕೆ ಸಮನ್ವಯ ಸಾಧಿಸಿ’

ಕೆ.ಆರ್. ಪೇಟೆ: ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ತಾಲ್ಲೂಕಿನಲ್ಲಿ ಇಲಾಖೆಗಳು ಸಮನ್ವಯತೆ ಸಾಧಿಸಿ ಪ್ರಕರಣಗಳು ಉಲ್ಬಣಗೊಳ್ಳದಂತೆ ಕ್ರಮ ವಹಿಸಬೇಕು ಎಂದು ತಹಶೀಲ್ದಾರ್ ನಿಸರ್ಗ ಪ್ರಿಯ ಸಲಹೆ ನೀಡಿದರು . ಪಟ್ಟಣದ ಮಿನಿವಿಧಾನಸೌಧದ ಸಭಾಂಗಣದಲ್ಲಿ ಡೆಂಗಿ ನಿಯಂತ್ರಣದ ಸಂಭಂದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡೆಂಗಿ ಪ್ರಕರಣಗಳು ಮಕ್ಕಳಿಂದ ವಯೋವೃದ್ದವರೆಗೂ ಹರಡುತ್ತಿದ್ದು ಶಾಲೆ ಅಂಗನವಾಡಿ ಮಕ್ಕಳ ಆರೋಗ್ಯವನ್ನು ಕಾಪಾಡುವುದು ಅಗತ್ಯ. ಶಿಕ್ಷಣ ಇಲಾಖೆ ಶಿಶು ಕಲ್ಯಾಣ ಇಲಾಖೆ ಆರೋಗ್ಯ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಬೇಕು ಶಾಲೆಯಲ್ಲಿ ಡೆಂಗಿ ನಿಯಂತ್ರಣದ ಬಗ್ಗೆ ಮಾಹಿತಿ ನೀಡಬೇಕು. ಪುರಸಭೆ ಮತ್ತು ಗ್ರಾಮ ಪಂಚಾಯಿತಿ ಅಧಕಾರಿಗಳು ಸೊಳ್ಳೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು’ ಎಂದು ಸೂಚಿಸಿದರು. ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಅಜಿತ್ ಮಾತನಾಡಿ ‘ತಾಲ್ಲೂಕಿನಲ್ಲಿ ಜನವರಿಯಿಂದ ಜೂನ್‌ವರೆಗೆ 9 ಪ್ರಕರಣಗಳು ವರದಿಯಾಗಿದ್ದು ಎಲ್ಲರೂ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ . ಆರೋಗ್ಯ ಇಲಾಖೆ ಸಿಬ್ಬಂದಿ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಡೆಂಗಿ ಹರಡುವ ಬಗ್ಗೆ ಮತ್ತು ನಿಯಂತ್ರಣದ ಬಗ್ಗೆ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡುವ ಬಗ್ಗೆ ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ’ ಎಂದು ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸೀತಾರಾಮ್ ಸಿಡಿಪಿಒ ಕಚೇರಿಯ ಮೇಲ್ವಿಚಾರಕಿ ರೂಪಾ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ನರಸಿಂಹರಾಜು ಶಿಕ್ಷಣ ಇಲಾಖೆಯ ಇಸಿಒ ನೀಲಾಮಣಿ ಆರೋಗ್ಯ ಪರಿವೀಕ್ಷಕ ಎಸ್. ಎಲ್ .ಸತೀಶ್. ಪುರಸಭೆಯ ಆರೋಗ್ಯ ಪರಿವೀಕ್ಷಕ ಅಶೋಕ್ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT