ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಮಂಗಲ: ನಿಂತಿದ್ದ KSRTC ಬಸ್‌ಗೆ ಕಾರು ಡಿಕ್ಕಿ, ನಾಲ್ವರು ಸ್ಥಳದಲ್ಲೇ ಸಾವು

Published 27 ಸೆಪ್ಟೆಂಬರ್ 2023, 5:28 IST
Last Updated 27 ಸೆಪ್ಟೆಂಬರ್ 2023, 5:28 IST
ಅಕ್ಷರ ಗಾತ್ರ

ಮಂಡ್ಯ: ನಾಗಮಂಗಲ ತಾಲ್ಲೂಕಿನ ಬಿ.ಜಿ.ನಗರದ ಬಳಿ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಸಾರಿಗೆ ಸಂಸ್ಥೆ ಬಸ್‌ಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಕ್ಸೆಂಚರ್ ಕಂಪನಿ‌ ಉದ್ಯೋಗಿಗಳಾದ ಬೆಂಗಳೂರಿನ ನಮಿತಾ, ಧಾರವಾಡದ ರಘುನಾಥ್ ಭಜಂತ್ರಿ, ಇನ್ಫೋಸಿಸ್ ಉದ್ಯೋಗಿ, ರಾಜಸ್ತಾನ ಮೂಲದ ಪಂಕಜ್ ಶರ್ಮಾ, ಬೆಂಗಳೂರಿನ ವಂಶಿಕೃಷ್ಣ ಮೃತಪಟ್ಟವರು. ವಯಸ್ಸಿನ ಮಾಹಿತಿ ತಿಳಿದು ಬಂದಿಲ್ಲ.

ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಕಾಲೇಜು ಎದುರಲ್ಲೇ ಬೆಳಿಗ್ಗೆ 7.45ರಲ್ಲಿ ಘಟನೆ ನಡೆದಿದೆ. ಕಾಲೇಜು ಮುಂದೆ ಪ್ರಯಾಣಿಕರನ್ನು ಇಳಿಸಲು ಬಸ್ ನಿಲ್ಲಿಸಿದಾಗ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಮಾರುತಿ‌ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಕಾರು ಚನ್ನರಾಯಪಟ್ಟಣ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ‌ನಜ್ಜುಗುಜ್ಜಾಗಿದೆ. ಸ್ಥಳದಲ್ಲಿದ್ದ ಜನರು, ವಿದ್ಯಾರ್ಥಿಗಳು ‌ಮೃತದೇಹಗಳನ್ನು ಹೊರ ತೆಗೆಯಲು ಸಹಾಯ ಮಾಡಿದರು.

ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ಮೃತದೇಹಗಳನ್ನು ಸಾಗಿಸಲಾಗಿದೆ.

ಬೆಳ್ಳೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT