ಮಂಡ್ಯ: ಕರ್ನಾಟಕ ಸಂಘದ ವತಿಯಿಂದ ನೀಡುವ ಪ್ರಥಮ ವರ್ಷದ ‘ಎಸ್.ಎಂ. ಕೃಷ್ಣ ಪ್ರಶಸ್ತಿ’ಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಆಯ್ಕೆಯಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಹೆಸರಿನಲ್ಲಿ ಅವರ ಹಿತೈಷಿಗಳು ಕರ್ನಾಟಕ ಸಂಘದೊಂದಿಗೆ ಕೂಡಿ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ. ರಾಜಕೀಯ, ಸಂಗೀತ, ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಯು ₹50 ಸಾವಿರ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಮಂಡ್ಯ ನಗರದ ಕರ್ನಾಟಕ ಸಂಘದ ಕೆ.ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಮೇ 5ರಂದು ಏರ್ಪಡಿಸಿರುವ ‘ಮರೆಯಲಾಗದ ಎಸ್.ಎಂ. ಕೃಷ್ಣ’ ಸಂಸ್ಮರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

‘ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕಿಮ್ಮನೆ ರತ್ನಾಕರ್ ಅವರು ಶುದ್ಧ ರಾಜಕಾರಣಕ್ಕೆ ಹೆಸರಾಗಿದ್ದಾರೆ. 2008ರಲ್ಲಿ ಮೊದಲ ಬಾರಿಗೆ ಶಾಸಕರಾಗಿ, 2013ರಲ್ಲಿ 2ನೇ ಬಾರಿಗೆ ಆಯ್ಕೆಗೊಂಡು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿ ಶಿಕ್ಷಣದ ಸುಧಾರಣೆ ಮತ್ತು ಆಧುನೀಕರಣಕ್ಕೆ ಶ್ರಮಿಸಿದ್ದಾರೆ’ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಎಂದು ಪ್ರೊ.ಜಯಪ್ರಕಾಶಗೌಡ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.