ಭಾರತೀನಗರ: ಇಲ್ಲಿನ ಸ್ಫೂರ್ತಿ ಲಯನ್ಸ್ ಸಂಸ್ಥೆ ವತಿಯಿಂದ ಕೆ.ಎಂ.ದೊಡ್ಡಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಹಸಿವು ಆರೈಕೆ ಕಾರ್ಯಕ್ರಮಕ್ಕೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಚಾಲನೆ ನೀಡಿದರು.

ನಂತರ ಮಾತನಾಡಿ, ‘ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯಲು ಬಂದು ಒಳರೋಗಿಗಳಾಗಿ ದಾಖಲಾಗುವವರಿಗೆ ಯಾವುದೇ ಊಟದ ಸೌಲಭ್ಯ ಇಲ್ಲದಿರುವುದನ್ನು ಗಮನಿಸಿ ಲಯನ್ಸ್ ಸಂಸ್ಥೆ ಅವರು ಹಸಿವು ಆರೈಕೆ ಕಾರ್ಯಕ್ರಮದಡಿ ಊಟದ ವ್ಯವಸ್ಥೆ ಕಲ್ಪಿಸಿರುವುದು ಶ್ಲಾಘನೀಯ’ ಎಂದರು.

‘ಹಸಿವುಮುಕ್ತ ಭಾರತ ನಿರ್ಮಾಣಕ್ಕೆ ಇಂತಹ ಕಾರ್ಯಕ್ರಗಳು ಪೂರಕ. ಈ ನಿಟ್ಟಿನಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ಹಸಿವು ನೀಗಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಹಸಿವುಮುಕ್ತ ಭಾತರವನ್ನು ನಿರ್ಮಾಣ ಮಾಡಲು ಸಹಕರಿಸಬೇಕು’ ಎಂದು ಮನವಿ ಮಾಡಿದರು.

ಇದೇ ಸಂದರ್ಭ ರೈತ ಸಂಘದ ಕೆಲವು ಮುಖಂಡರು ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು ಇಲ್ಲದಿರುವುದನ್ನು ಹಾಗೂ ಸ್ವಚ್ಛತೆ ಇಲ್ಲದಿರುವ ಬಗ್ಗೆ ತಿಳಿಸಿ ಉನ್ನತ ಮಟ್ಟದ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ವೈದ್ಯರನ್ನು ನೇಮಿಸಿ ನೇರವಾಗಬೇಕು’ ಎಂದು ಮನವಿ ಮಾಡಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಸ್ಫೂರ್ತಿ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಕೆ.ಎಲ್.ಶಿವರಾಮು, ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಬೋರೇಗೌಡ, ಪತ್ರಿಕಾ ಕಾರ್ಯದರ್ಶಿ ಅಣ್ಣೂರು ಸತೀಶ್, ಸದಸ್ಯರಾದ ವೈ.ಎಂ.ಬೋರೇಗೌಡ, ಚಿಕ್ಕರಸಿನಕೆರೆ ಗಿರೀಶ್, ಪದಾಧಿಕಾರಿಗಳಾದ ದೇವರಾಜು, ಎ.ಪಿ. ಸಂದೀಪ್, ಚನ್ನಶೆಟ್ಟಿ, ವೆಂಕಟೇಶ್, ರಘು, ಸಿದ್ದರಾಮೇಗೌಡ, ಮುಖಂಡರಾದ ಕೆ.ಟಿ.ಸುರೇಶ್, ಜೆಸಿಪಿ ಶಿವಲಿಂಗ, ಶೆಟ್ಟಹಳ್ಳಿ ಶಿವರಾಜು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-40-242922424

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.