ಭಾನುವಾರ, ಆಗಸ್ಟ್ 25, 2019
21 °C

ಕೆ.ಆರ್‌.ಪೇಟೆಗೆ ಎಚ್‌ಡಿಕೆ ಭೇಟಿ ಇಂದು: ನಿಖಿಲ್‌ ಅಭ್ಯರ್ಥಿ?

Published:
Updated:
Prajavani

ಮಂಡ್ಯ: ಕೆ.ಆರ್‌.ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಮುಂದೆ ನಡೆಯಲಿರುವ ಉಪ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಪುತ್ರ ಕೆ.ನಿಖಿಲ್‌ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಶನಿವಾರ ಕೆ.ಆರ್‌.ಪೇಟೆಗೆ ಭೇಟಿ ನೀಡುವ ಕುಮಾರಸ್ವಾಮಿ ಅವರು ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಸಭೆಯಲ್ಲಿ ಜಿಲ್ಲೆಯ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಉಪ ಚುನಾವಣೆಯಲ್ಲಿ ಗೆಲುವಿನ ಕಾರ್ಯತಂತ್ರ ರೂಪಿಸಲು ಕುಮಾರಸ್ವಾಮಿ ಅವರು ಕಾರ್ಯಕರ್ತರಿಗೆ ಸಲಹೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೆ.ನಿಖಿಲ್‌, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌–ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.

Post Comments (+)