ಕೆ.ಆರ್.ಪೇಟೆ: ಪಟ್ಟಣದಲ್ಲಿ ತಾಲ್ಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯುತ್ಸವವನ್ನು ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು.

ಪಟ್ಟಣದ ಪ್ರವಾಸಿಮಂದಿರ ಆವರಣದಿಂದ ಹೊರಟ ಅಂಬೇಡ್ಕರ್ ಅವರ ಭಾವಚಿತ್ರವನ್ನು ಹೊತ್ತ ಮೆರವಣಿಗೆ ಮುಖ್ಯರಸ್ತೆಯ ಮೂಲಕ ಹಾದು ಕೆ.ಪಿ.ಎಸ್ ಶಾಲೆಯ ಆವರಣದ ಸಮಾರಂಭದ ವೇದಿಕೆಗೆ ಆಗಮಿಸಿತು.

ಮೆರವಣಿಗೆಯಲ್ಲಿ ತಾಲ್ಲೂಕಿನ ವಿವಿದೆಡೆಯಿಂದ ಆಗಮಿಸಿದ್ದ ವಿವಿಧ ದಲಿತ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಅಂಬೇಡ್ಕರ್ ಅವರಿಗೆ ಜೈಕಾರ ಹಾಕಿದರಲ್ಲದೆ ತಮಟೆಯ ನಾದಕ್ಕೆ ಹೆಜ್ಜೆಹಾಕಿದರು. ಶಾಸಕ ಎಚ್.ಟಿ.ಮಂಜು ಅವರು ತಮಟೆ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮ ಹೆಚ್ಚಿಸಿದರು.

ಸಮಾರಂಭವನ್ನು ಉದ್ಘಾಟಿಸಿದ ಶಾಸಕ ಎಚ್.ಟಿ.ಮಂಜು ಮಾತನಾಡಿ, ದೇಶಕ್ಕೆ ಸಂವಿಧಾನ ರಚಿಸಿ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯವನ್ನೊದಗಿಸಿದ ಶ್ರೇಷ್ಠರಾಗಿದ್ದು, ಶೋಷಿತ ಸಮುದಾಯದ ಕಣ್ಮಣಿಯಾಗಿದ್ದಾರೆ’ ಎಂದರು.

ಉಪನ್ಯಾಸಕ ಕರುಣಾನಿಧಿ ಅವರು ‘ಅಂಬೇಡ್ಕರರ ಬದುಕು ಮತ್ತು ಹೋರಾಟ’ ಕುರಿತು ಪ್ರದಾನ ಭಾಷಣ ಮಾಡಿದರು. ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರ ಕುಮಾರ್ ಮಾತನಾಡಿದರು.

ಪ್ರಮುಖರಾದ ಆರ್ಟಿಒ ಮಲ್ಲಿಕಾರ್ಜುನ್, ಡಿ.ಪ್ರೇಮ್ ಕುಮಾರ್, ರಾಜಯ್ಯ, ಬಸ್ತಿರಂಗಪ್ಪ, ಕೃಷ್ಣಮೂರ್ತಿ, ಸೇರಿದಂತೆ ವಿವಿಧ ದಲಿತಪರ ಸಂಘಟನೆಗಳ ತಾಲ್ಲೂಕು ಘಟಕದ ಪದಾಧಿಕಾರಿಗಳು ಹಾಜರಿದ್ದರು. ಶ್ರೇಷ್ಠ ಸಾಧಕರನ್ನು ಸನ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-40-835104754

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.