ಕೆ.ಆರ್.ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಜೈನಹಳ್ಳಿ, ಐಪನಹಳ್ಳಿ ಮತ್ತು ಆಲಂಬಾಡಿ ಕಾವಲುಗಳಿಗೆ ಭೇಟಿ ನೀಡಿದ ಪಾಂಡವಪುರ ಉಪ ವಿಭಾಗಾಧಿಕಾರಿ ಡಾ.ಕೆ.ಆರ್.ಶ್ರೀನಿವಾಸ್ ಜನರಿಂದ ಕುಂದು ಕೊರತೆಗಳನ್ನು ಆಲಿಸಿದರು.

ಪೌತಿ ಖಾತೆಗೆ ಸಂಬಂಧಿಸಿದ ಅರ್ಜಿಗಳನ್ನು ಸಮರೋಪಾದಿಯಲ್ಲಿ ತಾಲ್ಲೂಕು ಕಚೇರಿಯಲ್ಲಿ ವಿಲೇ ಮಾಡಲಾಗುತ್ತಿದೆ. ಲಂಚಕ್ಕೆ ಬೇಡಿಕೆಯಿಟ್ಟು ಅನಗತ್ಯ ಕಿರುಕುಳ ನೀಡಿದರೆ ನನ್ನ ಗಮನಕ್ಕೆ ತನ್ನಿಎಂದು ಮನವಿ ಮಾಡಿದರು. ಪೌತಿ ಖಾತೆ ಮಾಡಿಸುವ ಕ್ರಮಗಳ ಮಾಹಿತಿ ನೀಡಿ ಪೌತಿ ಖಾತೆ ಬಗ್ಗೆ ಅರಿವು ಮೂಡಿಸಿದರು.

ಸ್ಮಶಾನ ಒತ್ತುವರಿ ಜಾಗದ ಬಗ್ಗೆ ರೈತರ ದೂರಿಗೆ, ಉಪ ವಿಭಾಗಾಧಿಕಾರಿ ಸ್ಮಶಾನ ಒತ್ತುವರಿ ತೆರವುಗೊಳಿಸುವ ಬಗ್ಗೆ ತಕ್ಷಣವೇ ಅಗತ್ಯ ಕ್ರಮ ವಹಿಸುವುದಾಗಿ ಭರವಸೆ ನೀಡಿದರು. ಜೈನಹಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸರ್ವರ್ ಸಮಸ್ಯೆಯಿಂದ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆಯಲ್ಲಿ ಆಗುತ್ತಿರುವ ತೊಂದರೆಯ ಬಗ್ಗೆ ಪರಿಶೀಲಿಸಿ, ಗ್ರಾಹಕರಿಗೆ ಟೋಕನ್ ಕೊಟ್ಟು ಪಡಿತರ ವಿತರಣೆ ಮಾಡುವಂತೆ ಸೂಚಿಸಿದರು. ಗ್ರಾಮಸ್ಥರು ಮತ್ತು ಮುಖಂಡರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-40-2141068148

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.