ಕೆ.ಆರ್.ಪೇಟೆ: 'ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಎಲ್ಲ ವರ್ಗದ ಜನರಿಗೆ ಅನುಕೂಲವಾಗಿರುವುದರಿಂದ ಬಿಜೆಪಿ ಸೇರಿದಂತೆ ಹಲವು ಪಕ್ಷಗಳ ಸರ್ಕಾರಗಳು ಬೇರೆ ರಾಜ್ಯಗಳಲ್ಲು ಜಾರಿಗೊಳಿಸುತ್ತಿವೆ’ ಎಂದು ಗ್ಯಾರಂಟಿ ಯೋಜನೆ ತಾಲ್ಲೂಕು ಸಮಿತಿಯ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್ ಹೇಳಿದರು.

ಪಟ್ಟಣದಲ್ಲಿ ಆಯೋಜಿಸಿದ್ದ ತಾಲ್ಲೂಕು ಗ್ಯಾರಂಟಿ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆ ಮುಂದುವರಿಯಲಿದ್ದು ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಯೋಜನೆಯ ಸಮರ್ಪಕ ಜಾರಿಗೆ ಪ್ರಯತ್ನ ನಡೆಸಲಿದೆ ಎಂದರು.

ಫಲಾನುಭವಿಗಳ ಸಮಸ್ಯೆಗಳನ್ನು ಪರಿಹರಿಸುವಲ್ಲಿ ದೂರುಗಳು ಬಾರದಂತೆ ಸಮಬಂದಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಾಮಾಣಿಕವಾಗಿ ಶ್ರಮಿಸುವಂತೆ ಸುಚಿಸಿದರು.

ಸಭೆಯಲ್ಲಿ ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮೀಗೌಡ, ತಾಲ್ಲೂಕು ಆಹಾರ ಇಲಾಖೆಯ ಶಿರಸ್ತೇದಾರ್ ನಟರಾಜ್, ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಸಿಡಿಪಿಓ ಪದ್ಮ, ಜಿಲ್ಲಾ ಉದ್ಯೋಗಾಧಿಕಾರಿ ವಿ.ನವೀನ್ ಕುಮಾರ್, ಡಿಪೋ ಟ್ರಾಪಿಕ್ ಇನ್ಸ್ಪೆಕ್ಟರ್ ಗವಿಸಿದ್ದಪ್ಪ ಪ್ರಗತಿಯ ವರದಿಯನ್ನು ಮಂಡಿಸಿದರು. ತಾಲ್ಲೂಕು ಪಂಚಾಯಿತಿ ಲೆಕ್ಕಾಧಿಕಾರಿ ಶಂಕರ್, ಸಮಿತಿಯ ಸದಸ್ಯರಾದ ಮೆಣಸ ಕುಮಾರ್, ರೂಪಾ, ಶಿವಮ್ಮ, ಲತಾ, ಕೆ.ಎಸ್.ಆರ್.ಟಿ.ಸಿ ಶಿವಣ್ಣ, ಸಿಂಗನಹಳ್ಳಿ ಗೋಪಾಲ್, ಬಂಡಿಹೊಳೆ ಯೋಗೇಶ್, ಹಾಫೀಜ್ಉಲ್ಲಾ, ಗೋವಿಂದನಹಳ್ಳಿ ಶ್ಯಾಮಣ್ಣ, ಬಿ.ಸಿ.ಮಾಧು, ಸೋಮಶೇಖರ್, ಶಿವಲಿಂಗಪ್ಪ, ವಿಷಯ ನಿರ್ವಾಹಕಿ ನಂದಿನಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-40-1065278011

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.