ಕೆ.ಆರ್.ಪೇಟೆ: ತಾಲ್ಲೂಕಿನ ಶಾಸಕ ಎಚ್.ಟಿ.ಮಂಜು ಹುಟ್ಟೂರು ಹರಳಹಳ್ಳಿ ಗ್ರಾಮದಲ್ಲಿ ಗ್ರಾ.ಪಂ. ವ್ಯಾಪ್ತಿಯ ರಾಯಸಮುದ್ರ ಗ್ರಾಮದ ಮಹಿಳೆಯರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನಲ್ಲಿ ಬಿರುಬಿಸಿಲು ಹೆಚ್ಚಿದ್ದು ಅಂತರ್ಜಲ ಮಟ್ಟ ಕುಸಿದಿರುವುದರಿಂದ ಹರಳಹಳ್ಳಿ ಸೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಯಸಮುದ್ರ ಗ್ರಾಮಗಳಲ್ಲಿ ತೀವ್ರತರ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಸಮಸ್ಯೆ ಬಗೆಹರಿಸಿ ಶುದ್ಧ ಕುಡಿಯುವ ನೀರನ್ನು ಪೂರೈಸಲು ಗ್ರಾಮ ಪಂಚಾಯಿತಿ ವಿಫಲವಾಗಿದೆ. ಶಾಸಕರು ಸಮಸ್ಯೆ ಬಗೆಹರಿಸುತ್ತಿಲ್ಲವೆಂದು ರಾಯಸಮುದ್ರ ಸೇರಿ ಸುತ್ತಮುತ್ತಲ ಗ್ರಾಮದ ಮಹಿಳೆಯರು ಖಾಲಿ ಕೊಡ ಹಿಡಿದು ಶುದ್ಧ ನೀರಿನ ಪೂರೈಕೆಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು, ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದ ಮಹಿಳೆಯರು ಒಂದೆರಡು ದಿನಗಳಲ್ಲಿ ನಮ್ಮ ಬೇಡಿಕೆ ಹೀಡೇರಿಸದಿದ್ದರೆ ಚಳವಳಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮಹಿಳೆಯರು ಸೇರಿ ಗ್ರಾಮದ ಮುಖಂಡರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-40-1508586422

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.