ಕೆ.ಆರ್.ಪೇಟೆ: ‘ಸಾರ್ವಜನಿಕರಿಗೆ ಸೂಕ್ತ ಚಿಕಿತ್ಸೆಯನ್ನು ತುರ್ತಾಗಿ ನೀಡಿ ಪ್ರಾಣರಕ್ಷಿಸುವ ಉದ್ದೇಶದಿಂದ ಸರ್ಕಾರ ಆಸ್ಪತ್ರೆಗಳನ್ನು ನಿರ್ಮಿಸಿದೆ. ರೋಗಿಗಳು ಯಾವುದೇ ಸಮಯದಲ್ಲಿ ಬಂದರೂ ವೈದ್ಯರು ಸೌಜನ್ಯಯುತವಾಗಿ ನಡೆದುಕೊಳ್ಳುವ ಮೂಲಕ ರೋಗಿಯ ಪ್ರಾಣರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು’ ಎಂದು ಶಾಸಕ ಎಚ್.ಟಿ.ಮಂಜು ಹೇಳಿದರು.

ಪಟ್ಟಣದ ದುಂಡಶೆಟ್ಟಿ-ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರೆಯಲಾಗಿದ್ದ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಅಪಘಾತ, ಆತ್ಮಹತ್ಯೆ ಸೇರಿದಂತೆ ಹಲವು ಕಾರಣಗಳಿಂದ ಸಾವು ಸಂಭವಿಸಿದಾಗ ನಡೆಸುವ ಮರಣೋತ್ತರ ಪರೀಕ್ಷೆಯ ಸಂದರ್ಭದಲ್ಲಿ ಹಣ ಕೇಳುತಿದ್ದಾರೆಂಬ ದೂರು ಬಂದಿದೆ. ಪಿ.ಎಂ.ಮಾಡಲು ಸಂಬಂಧಿಕರಿಂದ ಒಂದು ರೂಪಾಯಿಯನ್ನೂ ಪಡೆಯಬಾರದು’ ಎಂದರು.

‘ಸಾರ್ವಜನಿಕರೂ ಕೂಡ ವೈದ್ಯರೊಂದಿಗೆ ಸೌಜನ್ಯದಿಂದ ವರ್ತಿಸಿ. ಸಣ್ಣ ಪುಟ್ಟ ವಿಚಾರಕ್ಕೆ ವೈದ್ಯರ ಮೇಲೆ ಹಲ್ಲೆ ಮತ್ತು ದಬ್ಬಾಳಿಕೆ ಮಾಡಿದರೆ ಯಾವ ವೈದ್ಯರು ಉತ್ತಮ ಸೇವೆಕೊಡಲು ಮುಂದೆ ಬರುತ್ತಾರೆ? ಇದರಿಂದ ಸಾವಿರಾರು ರೋಗಿಗಳಿಗೆ ತೊಂದರೆಯಾಗಲಿದೆ. ಅನ್ಯಾಯವಾಗುತಿದ್ದರೆ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಸಣ್ಣಪುಟ್ಟ ಕಾರಣಕ್ಕೆ ಕಿರಿಕ್ ಮಾಡುವುದು ಬೇಡ’ ಎಂದರು.

‘ಪ್ರತಿ ಮೂರು ತಿಂಗಳಿಗೊಮ್ಮೆಆರೋಗ್ಯ ರಕ್ಷಾ ಸಭೆ ನಡೆಸಿ ಆಸ್ಪತ್ರೆಗಳ ಸಮಸ್ಯೆಗಳ ಬಗ್ಗೆ ಸದಸ್ಯರಿಗೆ ತಿಳಿಸಿಸಿಕೊಟ್ಟರೆ ಸರ್ಕಾರದ ಗಮನಕ್ಕೆ ತರಲು ಸಾಧ್ಯವಾಗುತ್ತದೆ. ರಕ್ಷಾ ಸಮಿತಿಯ ಸದಸ್ಯರ ಪರಿಚಯ ಎಲ್ಲಾ ವೈದ್ಯರಿಗೂ ಆಗುವಂತೆ ಮಾಡಬೇಕು’ ಎಂದು ಸಮಿತಿ ಸದಸ್ಯರು ಸಲಹೆ ನೀಡಿದರು.

ಸಭೆಯಲ್ಲಿ ಆಡಳಿತ ವೈದ್ಯಾಧಿಕಾರಿ ಡಾ.ಎಲ್.ಸಿ.ಮಂಜುಳಾ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸುಷ್ಮಾ , ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಜಿತ್ ಸೇರಿದಂತೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಹೆತ್ತಗೋನಹಳ್ಳಿ ನಾರಾಯಣಗೌಡ, ಕುಮಾರ್, ಮಂಜುನಾಥ್, ಪುಟ್ಟರಾಜು, ಶಾಂತಾಗಣೇಶ್, ಇಲಿಯಾಜ್ ಅಹ್ಮದ್, ಸುರೇಶ್ ಕೆಂಪನಾಯಕ್, ವೈದ್ಯರಾದ ಡಾ. ಶಿವಕುಮಾರ್, ಡಾ.ಪ್ರಕಾಶ್ ನಾಯಕ್, ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-40-1869565198

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.