ಕೆ.ಆರ್.ಪೇಟೆ: ‘ಕೆಡಿಪಿ ಸಭೆಯ ಉದ್ದೇಶ ತಿರುಚಿದ ಹಳೆಯ ಅಂಕಿ ಅಂಶಗಳನ್ನೇ ಕೇಳಿಸಿಕೊಳ್ಳುವುದಲ್ಲ. ಪ್ರಗತಿಯ ಬಗ್ಗೆ ಮಾತನಾಡಿ , ಪ್ರಗತಿ ಸಾಧಿಸಲು ಸಾಧ್ಯವಾಗದಿದ್ದವರು ವರ್ಗಾವಣೆ ಮಾಡಿಸಿಕೊಂಡು ಹೋಗಿ’ ಎಂದು ಶಾಸಕ ಎಚ್.ಟಿ.ಮಂಜು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಪ್ರಸಂಗ ಕೆಡಿಪಿ ಸಭೆಯಲ್ಲಿ ನಡೆಯಿತು.

ಪಟ್ಟಣದ ಹೊರವಲಯದ ಚಿಕ್ಕೋನಹಳ್ಳಿಯಲ್ಲಿ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ತ್ರೈ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲ್ಲೂಕಿನಲ್ಲಿ ವಿವಿಧ ಇಲಾಖೆಯಲ್ಲಿ ಕಾಮಗಾರಿಗಳು ನಿಧಾನ ಗತಿಯಲ್ಲಿವೆ. ಕೆಲಸದ ಬಗ್ಗೆ ಬದ್ಧತೆ ಇರಬೇಕು ಎಂದು ತರಾಟೆಗೆ ತೆಗೆದುಕೊಂಡರು.

ತಾಲ್ಲೂಕಿನಲ್ಲಿ ಕಳೆದ ಮೂರು ವರ್ಷಗಳ ಹಿಂದೆ ಆರಂಭವಾದ ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗಳು ಇನ್ನೂ ಮುಕ್ತಾ ಯವಾಗಿಲ್ಲ. ಈ ಬಗ್ಗೆ ಪ್ರತಿಬಾರಿ ಕೆಡಿಪಿ ಸಭೆಯಲ್ಲಿ ಪ್ರಶ್ನಿಸಿದರೂ ಅದೇ ಉತ್ತರ ಎಂದು ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಹೊಸಹೊಳಲು ಚಿಕ್ಕಕೆರೆ ಕಾಮಗಾರಿ , ಸಂತೇಬಾಚಹಳ್ಳಿ ಕೆರೆ ಕಾಮಗಾರಿ ಚುರುಕು ಗೊಳಿಸುವಂತೆ ಸೂಚಿಸಿದರು. ನೀರಾವರಿ ಅಧಿಕಾರಿಗಳು ತಾಲ್ಲೂಕಿನ ಕೆರೆ ಕಟ್ಟೆಗಳನ್ನು ತುಂಬಿಸಿ 15 ದಿನಗಳಲ್ಲಿ ವರದಿ ನೀಡಬೇಕು ಎಂದು ಸೂಚನೆ ನೀಡಿದರು. ಯಂತ್ರಾಗಾರದ ವಿದ್ಯುತ್ ಬಿಲ್ ಪಾವತಿಗೆ ಸೂಕ್ತ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು. ಕಿಕ್ಕೇರಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕಿ ರೇವತಿ ಅವರಿಗೆ ಫೋನ್ ಕರೆ ಮಾಡಿದರೆ, ‘ ಬಂದೂಕು ಕೊಡಿ ಶಾಸಕರು ಕರೆ ಮಾಡಿದ್ದಾರೆ ಶೂಟ್ ಮಾಡಿಕೊಳ್ಳೋದಾಗಿ ಠಾಣೆಯ ಸಿಬ್ಬಂದಿಯಗೆ ಹೇಳುತ್ತಾರಂತೆ . ಗೃಹ ಇಲಾಖೆಗೆ ವರದಿ ನೀಡುವಂತೆ ನಿರ್ದೇಶನ ನೀಡಿದರು.

ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣವನ್ನು ಮರು ನಿರ್ಮಿಸಲು ₹16 ಕೋಟಿ ಅಂದಾಜು ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಪ್ರಗತಿ ಬಗ್ಗೆ ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಾರಿಗೆ ಇಲಾಖೆಯ ಎಇಇ ಗಣೇಶ್, ಇಲಾಖೆ, ಎಸ್.ಡಿ.ಆರ್.ಎಫ್.ಸಿ. ಯಿಂದ ತಲಾ ₹2 ಕೋಟಿ ಅನುದಾನ ಸಿಗಲಿದ್ದು , ಹಣ ಹೊಂದಿಸಿ ನಿಲ್ದಾಣ ಮರು ನಿರ್ಮಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಗ್ರೇಡ್2 ತಹಶೀಲ್ದಾರ್ ಲೋಕೇಶ್, ತಾಲ್ಲೂಕು ಪಂಚಾಯಿತಿ ಇಒ ಸುಷ್ಮಾ, ಆಡಳಿತಾಧಿಕಾರಿ ಆಶಾ, ಯೋಜನಾಧಿಕಾರಿ ಶ್ರೀನಿವಾಸ್, ತಾಲ್ಲೂಕು , ಗ್ಯಾರಂಟಿ ಯೋಜನೆ ಅಧ್ಯಕ್ಷ ಎ.ಬಿ.ಕುಮಾರ್, ಕೆಡಿಪಿ ಸದಸ್ಯರಾದ ಬೀರುವಳ್ಳಿ ಆಕಾಶ್, ಬೂಕನಕೆರೆ ಮಲ್ಲಿಕಾರ್ಜುನ್, ಇಲ್ಯಾಸ್ ಪಾಷಾ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಿಮ್ಮೇಗೌಡ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ದಿವಾಕರ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಜಿತ್, ಹೇಮಾವತಿ ನೀರಾವರಿ ಇಲಾಖೆಯ ಎಇಇ ಚಂದ್ರೇಗೌಡ, ಚೆಸ್ಕಾಂ ಇಇ ಪುಟ್ಟಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.