ಕೆ.ಆರ್.ಪೇಟೆ: ಗುಣಮಟ್ಟದ ವೈದ್ಯಕೀಯ ಸೇವೆಯು ಗ್ರಾಮೀಣ ಜನರಿಗೂ ಲಭ್ಯವಾಗಬೇಕೆಂಬ ಸದುದ್ದೇಶದಿಂದ ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಐವತ್ತು ಹಾಸಿಗೆಗಳ ದುಂಡಶೆಟ್ಟಿ ಲಕ್ಷ್ಮಮ್ಮ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸೋಮವಾರ ಲೋಕಾರ್ಪಣೆ ಮಾಡಿದ ನಂತರ ಅವರು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಜನಪರ ಕೆಲಸಗಳನ್ನು ಮಾಡುವುದೇ ನಮ್ಮ ಸರ್ಕಾರದ ಗುರಿ. ಹಿಂದಿನ ಸರ್ಕಾರ ಜಾರಿಗೊಳಿಸಿದ್ದ ಹತ್ತು ಹಲವು ಅಭಿವೃದ್ಧಿ ಕೆಲಸಗಳನ್ನು ನಮ್ಮ ಸರ್ಕಾರ ಜಾರಿಗೊಳಿಸುತ್ತಿದೆ. ಅಭಿವೃದ್ಧಿ ಎಂಬುದು ನಿರಂತರ ಪ್ರಕ್ರಿಯೆ. ಒಂದು ಸರ್ಕಾರ ಮಾಡಿದ ಉತ್ತಮ ಕೆಲಸವನ್ನು ಮತ್ತೊಂದು ಸರ್ಕಾರ ಮುಂದುವರಿಸಬೇಕು. ಯಾರು ಮಾಡಿದರು ಎಂಬುದಕ್ಕಿಂತ ಯೋಜನೆಯ ಅನುಷ್ಠಾನ ಮುಖ್ಯವಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಹೆಜ್ಜೆ ಹಾಕಿದೆ ಎಂದರು.

ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಅಗತ್ಯವಿರುವ ಉಪಕರಣಗಳ ಜತೆಗೆ ವೈದ್ಯರು ಮತ್ತು ಸಿಬ್ಬಂದಿ ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಟಿ.ಮಂಜು ಮಾತನಾಡಿ, ಈ ದಿನ ಲೋಕಾರ್ಪಣೆಗೊಂಡ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸೇರಿ ಸಾರ್ವಜನಿಕ ಆಸ್ಪತ್ರೆ ನಿರ್ಮಾಣವಾಗಿರುವ ನಿವೇಶನದ ಜಾಗವನ್ನು ದುಂಡಶೆಟ್ಟಿ ಲಕ್ಷ್ಮಮ್ಮ ವಂಶಸ್ಥರು ನೀಡಿದ್ದು ಅವರ ಸೇವೆಯನ್ನು ಸ್ಮರಿಸಬೇಕು. ಅವರ ಕುಟುಂಬದ ಸದಸ್ಯರೊಬ್ಬರನ್ನು ಆರೋಗ್ಯ ರಕ್ಷಾ ಸಮಿತಿಯಲ್ಲಿ ಕಾಯಂ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಮನವಿ ಮಾಡಿದರು.

‘ಮಾಜಿ ಸಚಿವ ನಾರಾಯಣಗೌಡರ ಅವಧಿಯಲ್ಲಿ ಆಸ್ಪತ್ರೆಗೆ ಶಂಕುಸ್ಥಾಪನೆಯಾಗಿತ್ತು. ನಾನು ಶಾಸಕನಾದ ನಂತರ ಅಗತ್ಯ ಅನುದಾನ ತಂದು ಅಭಿವೃದ್ಧಿ ಕೆಲಸ ತ್ವರಿತವಾಗಿ ಆಗುವಂತೆ ನೋಡಿಕೊಂಡಿದ್ದೇನೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ಕೊರತೆ ಇದ್ದು, ಹುದ್ದೆ ಭರ್ತಿ ಮಾಡಿಕೊಡಬೇಕು’ ಎಂದು ಶಾಸಕರು ಮನವಿ ಮಾಡಿದರು.

‘ಈ ಆಸ್ಪತ್ರೆಗೆ ಮಂಜೂರಾಗಿದ್ದ ಅನುದಾನ ಕೆ.ಆರ್.ನಗರ ಆಸ್ಪತ್ರೆಗೆ ಹೋಗಿದೆ. ನಮ್ಮ ಆಸ್ಪತ್ರೆಗೆ ಬರಬೇಕಾದ ಅನುದಾನವನ್ನು ಕೊಡಿಸಿಕೊಡಬೇಕು’ ಎಂದು ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಮಂಜುಳ ಮಾತನಾಡಿದರು. ರಾಜ್ಯ ಕೈಮಗ್ಗ ನಿಗಮದ ಅಧ್ಯಕ್ಷ ಬಿ. ನಾಗೇಂದ್ರಕುಮಾರ್, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಜಿ.ಪಂ. ಮಾಜಿ ಸದಸ್ಯ ಬಿ.ಎಲ್.ದೇವರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಬಲದೇವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್, ಉಪ ವಿಭಾಗಾಧಿಕಾರಿ ಕೆ. ಶ್ರೀನಿವಾಸ್, ತಹಶೀಲ್ದಾರ್ ಎಸ್.ಯು. ಅಶೋಕ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಜಿತ್, ಆಸ್ಪತ್ರೆಗೆ ಜಾಗ ನೀಡಿದ ದುಂಡುಶೆಟ್ಟರ ಕುಟುಂಬದ ವಂಶಸ್ಥರಾದ ವೆಂಕಟಶೆಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-40-2039396555

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.