ಕೆ.ಆರ್.ಪೇಟೆ: ವಿದ್ಯಾರ್ಥಿಗಳು ಪೈಪೋಟಿಯನ್ನು ಆತ್ಮವಿಶ್ವಾಸದಿಂದ ಎದುರಿಸಿ ಮುನ್ನಡೆಯಬೇಕು. ಎಂತಹ ಪರಿಸ್ಥಿತಿ ಎದುರಾದರೂ ಎದೆಗುಂದದೆ ಸೋಲನ್ನು ಗೆಲುವಿನ ಮೆಟ್ಟಿಲನ್ನಾಗಿಸಿಕೊಂಡು ಹೆಜ್ಜೆ ಹಾಕಬೇಕೆಂದು ಶಾಸಕ ಎಚ್.ಟಿ.ಮಂಜು ಕಿವಿಮಾತು ಹೇಳಿದರು.

ಪಟ್ಟಣದಲ್ಲಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದಮಂಗಳವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನ ಉಪನ್ಯಾಸ ನೀಡಿದ ನಿವೃತ್ತ ಐಎಎಸ್ ಅಧಿಕಾರಿ ಸಿ. ಸೋಮಶೇಖರ್, ‘12ನೇ ಶತಮಾನ ದಲ್ಲಿಯೇ ವಚನಕ್ರಾಂತಿಯನ್ನು ನಡೆಸಿ ಸಮ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದ ಅಣ್ಣ ಬಸವಣ್ಣನವರ ತತ್ವ ಸಂದೇಶಗಳು ಸಾರ್ವಕಾಲಿಕವಾಗಿವೆ. ಶಿವಶರಣರ ವಚನಗಳನ್ನು ಓದಿಕೊಂಡರೆ ಮೇಲು ಮತ್ತು ಕೀಳು ಎಂಬ ಮನೋಭಾವ ತೊಲಗಿ ಸರ್ವ ಸಮಾನತೆಯ ಧ್ಯೇಯ ಅನುರಣಿಸುತ್ತದೆ. ಮಾಡುವ ಕೆಲಸ ಚಿಕ್ಕದಿರಲಿ ಅಥವಾ ದೊಡ್ಡದಿರಲಿ ನಮ್ಮ ಕಾಯಕದಲ್ಲಿ ನಿಷ್ಠೆ ಮತ್ತು ಪ್ರಾಮಾಣಿಕತೆಯನ್ನು ಅಳವಡಿಸಿಕೊಂಡು ಹೆಜ್ಜೆ ಹಾಕಿದರೆ ಯಶಸ್ಸನ್ನು ಗಳಿಸಿ ಮುನ್ನಡೆಯಬಹುದಾಗಿದೆ’ ಎಂದರು.

ಬೇಬಿ ಬೆಟ್ಟದ ರಾಮಯೋಗೀಶ್ವರ ಮಠದ ಶಿವಬಸವ ಸ್ವಾಮೀಜಿ, ಕಾಪನಹಳ್ಳಿ ಗವಿಮಠದ ಸ್ವತಂತ್ರ ಚೆನ್ನವೀರಯ್ಯ ಸ್ವಾಮೀಜಿ , ಪುರದ ಮಲೆ ಮಹದೇಶ್ವರ ದೇವಸ್ಥಾನದ ಬಸಪ್ಪ ಗುರು, ಬೆಡದಹಳ್ಳಿ ಮಠದ ರುದ್ರಮುನಿ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚಿಸಿದರು.

ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರಶಸ್ತಿ ಮತ್ತು ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರಿಕ್ಷೆಗಳಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಗೌರವಿಸಲಾಯಿತು.

ತಾಲ್ಲೂಕು ಘಟಕದ ಅಧ್ಯಕ್ಷ ಎನ್. ಸುಬ್ರಮಣ್ಯ ಅಧ್ಯಕ್ಷತೆ ವಹಿಸಿದ್ದರು. ಪಾಂಡವಪುರ ಉಪವಿಭಾಗಾಧಿಕಾರಿ ಕೆ.ಆರ್. ಶ್ರೀನಿವಾಸ್, ಆರ್ಟಿಒ ಮಲ್ಲಿಕಾರ್ಜುನ್, ಪ್ರಾಧ್ಯಾಪಕ ಯತೀಶ್ವರ್, ವೀರಶೈವ ಲಿಂಗಾಯಿತ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಸುಜೇಂದ್ರ ಕುಮಾರ್, ಉದ್ಯಮಿ ಬೂಕಹಳ್ಳಿ ಮಂಜು ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ವೀರಶೈವ ಲಿಂಗಾಯಿತ ಸಮಾಜದ ಮುಖಂಡರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-40-945451061

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.