ಮಂಗಳವಾರ, ಜೂನ್ 22, 2021
29 °C

ಎಸ್‌.ಎಂ.ಕೃಷ್ಣ ಅವರಿಂದ 100 ಸಿಲಿಂಡರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಜಿಲ್ಲೆಗೆ 100 ಜಂಬೋ ಸಿಲಿಂಡರ್‌ ಹಾಗೂ 10 ಸಾವಿರ ಎನ್‌–95 ಮಾಸ್ಕ್‌ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಆಮ್ಲಜನಕ ಪೂರೈಕೆಗೆ ಅನುಕೂಲವಾಗುವಂತೆ ತಕ್ಷಣ 100 ಜಂಬೋ ಸಿಲಿಂಡರ್‌ ನೀಡಲಾಗುವುದು. ಜಿಲ್ಲಾಸ್ಪತ್ರೆ ಹಾಗೂ ಇತರ ತಾಲ್ಲೂಕು ಆಸ್ಪತ್ರೆಗಳಲ್ಲಿ ಶಾಶ್ವತವಾಗಿ ಆಮ್ಲಜನಕ ಪೂರೈಕೆಗೆ ಬಳಸಿಕೊಳ್ಳಬೇಕು. ಜೊತೆಗೆ ಜಿಲ್ಲೆಯ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರ ಬಳಕೆಗೆ ಎನ್‌–95 ಮಾಸ್ಕ್‌ ಕೊಡಿಸಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರಿಗೆ ಪತ್ರ ಬರೆದಿರುವ ಅವರು ಸಿಲಿಂಡರ್‌ ಹಾಗೂ ಮಾಸ್ಕ್‌ಗಳನ್ನು ಶೀಘ್ರ ಪೂರೈಸಲಾಗುವುದು ಎಂದು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು