ಕೆ.ಆರ್.ಪೇಟೆ:ತಾಲ್ಲೂಕಿನ ಶೀಳನೆರೆ ಹೋಬಳಿಯ ಬೊಮ್ಮನಾಯಕನಹಳ್ಳಿ ಗ್ರಾಮದ ನೂತನ ಮಂಚಮ್ಮ ಮತ್ತು ಮಾಸ್ತಮ್ಮ ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ ಹಾಗೂ ಶಿಖರ ಕಳಸಾರೋಹಣ ಮತ್ತು ದೇವಸ್ಥಾನದ ಲೋಕಾರ್ಪಣೆ ನಡೆಯಿತು.

ಬೆಂಗಳೂರಿನ ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ನಿಶ್ಚಲಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿ, ದೇವಾಲಯಗಳು ನಮ್ಮ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಜೀವಂತ ಸ್ಮಾರಕಗಳಾಗಿದ್ದು , ಸಂಸ್ಕೃತಿಯ ಪ್ರತಿಬಿಂಬವಾಗಿದೆ. ದೇವಸ್ಥಾನ ಪರಿಸರವನ್ನು ಸ್ವಚ್ಚವಾಗಿಡಬೇಕು. ಪ್ರತಿನಿತ್ಯ ಪೂಜೆ ನಡಯಬೇಕೆಂದರು.

ಮಂಡ್ಯ ಜಿಲ್ಲಾ ಕೇಂದ್ರಕ್ಕೆ ಉತ್ತಮವಾದ ಚತುಷ್ಪಥ ರಸ್ತೆ , ಸಾರಿಗೆ ಸಂಪರ್ಕಕ್ಕೆ ಶಾಸಕರು ಜನರ ಧ್ವನಿಯಾಗಿ ಕೆಲಸಮಾಡುವಂತೆ ಸಲಹೆ ನೀಡಿದರು.ಶಾಸಕ ಎಚ್.ಟಿ.ಮಂಜು ಅಧ್ಯಕ್ಷತೆ ವಹಿಸಿ ಮಾತನಾಡಿ ದೇವಾಲಯಗಳು ಸಮಾಜ ಹಾಗೂ ಯುವಕರನ್ನು ಸರಿದಾರಿಯಲ್ಲಿ ಮುನ್ನಡೆಸುವಲ್ಲಿ ಮಾರ್ಗದರ್ಶಿಯಾಗಿವೆ ಎಂದರು. ಶಾಸಕರ ಪತ್ನಿ ರಮಾ, ಗ್ರಾಮದ ಮುಖಂಡರು, ಹೋಬಳಿಯ ಭಕ್ತರು, ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-40-1855709183

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.