ಕೆ.ಆರ್.ಪೇಟೆ: ಕಂದಾಯ ಇಲಾಖೆಯಿಂದ ಪೌತಿ ಖಾತೆ ವಿಷಯದಲ್ಲಿ ರೈತರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಿ ನೊಂದ ರೈತರಿಗೆ ನ್ಯಾಯ ಒದಗಿಸಬೇಕು, ಎಂದು ಒತ್ತಾಯಿಸಿ ತಾಲ್ಲೂಕು ರೈತಸಂಘದ ಮುಖಂಡರು ಗುರುವಾರ ಮಿನಿ ವಿಧಾನಸೌಧದ ಮುಂದೆ ಆರಂಭಿಸಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಎರಡನೇ ದಿನವೂ ಮುಂದುವರೆಯಿತು.

ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರದ ವಿರುದ್ಧ ಕ್ರಮ ವಹಿಸಬೇಕು, ವಸತಿಶಾಲೆಯ ಅಕ್ಕಿಹಗರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಬೇಡಿಕೆಯೊಂದಿಗೆ ಮಿನಿ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಿದ ರೈತರು, ‘ಸರ್ಕಾರದ ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಶಂಖ, ಜಾಗಟೆ ಮತ್ತು ತುತ್ತೂರಿ ಊದಿ ರೈತರ ಪಾಲಿಗೆ ಸರ್ಕಾರ ಸತ್ತಿದೆ, ಗೋವಿಂದಾ.. ಗೋವಿಂದಾ..’ ಎಂದು ಧರಣಿ ನಡೆಸಿದರು.

ತಹಶೀಲ್ದಾರ್ ಅವರ ಮನವೊಲಿಕೆಗೆ ಜಗ್ಗದ ಪ್ರತಿಭಟನಾಕಾರರು ಆಹೋರಾತ್ರಿ ಮಿವಿವಿಧಾನಸೌಧ ಮೆಟ್ಟಿಲ ಮೇಲೆಯೇ ಕುಳಿತು ಪ್ರತಿಭಟನೆ ಮುಂದುವರಿಸಿದರು. ರಾತ್ರಿ ಮೆಟ್ಟಲುಗಳಲ್ಲೇ ಮಲಗಿ ಪ್ರತಿಭಟನೆ ನಡೆಸಿದರು.

ರೈತ ಸಂಘದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಮುದುಗೆರೆ ರಾಜೇಗೌಡ ಮಾತನಾಡಿ, ‘ತಾಲ್ಲೂಕಿನಲ್ಲಿ ಎಲ್ಲಾ ಇಲಾಖೆಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಈ ಬಗ್ಗೆ ಮಾಹಿತಿ ನೀಡಿದರೂ ಯಾವ ಕ್ರಮವನ್ನೂ ಕೈಗೊಳ್ಳುತ್ತಿಲ್ಲ’ ಎಂದರು.

‘ಸರ್ಕಾರಿ ಆಸ್ತಿ ಪಾಸ್ತಿಗಳು ರಾಜಾರೋಷವಾಗಿ ಬಲಾಢ್ಯರ ಅತಿಕ್ರಮಕ್ಕೆ ಒಳಗಾಗುತ್ತಿದ್ದರೂ ಸರ್ಕಾರಿ ಆಸ್ತಿ ಸಂರಕ್ಷಣೆಗೆ ಅಧಿಕಾರಿಗಳು ಕ್ರಮ ವಹಿಸುತ್ತಿಲ್ಲ. ಅಧಿಕಾರಿಗಳು ಮತ್ತು ರಾಜಕಾರಣಿಗಳು ಭ್ರಷ್ಟರ ರಕ್ಷಣೆಗೆ ನಿಂತಿದ್ದಾರೆ’ ಎಂದು ಆರೋಪಿಸಿದ ಜಿಲ್ಲಾ ರೈತಸಂಘದ ಮುಖಂಡರಾದ ಕೆ.ಆರ್.ಜಯರಾಮು, ಮರುವನಹಳ್ಳಿ ಶಂಕರ್, ಕಾರಿಗನಹಳ್ಳಿ ಪುಟ್ಟೇಗೌಡ, ನಂದಿನಿ ಜಯರಾಮು, ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತಪ್ಪಿತಸ್ಥ ಅಧಿಕಾರಿಗಳು ಮತ್ತು ನೌಕರರ ವಿರುದ್ಧದ ಕಠಿಣ ಕ್ರಮ ಜರುಗಿಸುವವರೆಗೂ ನಾವು ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಎಸ್.ಯು.ಅಶೋಕ್, ‘ಏಪ್ರಿಲ್ 18 ರಂದು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಕರೆಸಿ ರೈತರ ಸಮ್ಮುಖದಲ್ಲಿಯೇ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇನೆ. ಅಲ್ಲಿಯವರೆಗೂ ಪ್ರತಿಭಟನೆಯನ್ನು ಕೈಬಿಡಿ’ ಎಂದು ಮನವಿ ಮಾಡಿದರು.

ತಾಲ್ಲೂಕು ಆಡಳಿತದ ಮನವಿಯನ್ನು ತಿರಸ್ಕರಿಸಿರುವ ರೈತರು, ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಪೊಲೀಸರು ವ್ಯಾಪಕ ಬಂದೋಬಸ್ತ್ ವಹಿಸಿದ್ದಾರೆ. ರೈತ ಮುಖಂಡರಾದ ಚೌಡೇನಹಳ್ಳಿ ಕೃಷ್ಣೇಗೌಡ, ನೀತಿಮಂಗಲ ಮಹೇಶ್, ಕರೋಟಿ ತಮ್ಮಯ್ಯ, ಹಿರೀಕಳಲೆ ಬಸವರಾಜು, ಎಲ್.ಬಿ.ಜಗದೀಶ್, ಬೂಕನಕೆರೆ ನಾಗರಾಜು, ಮಡುವಿನಕೋಡಿ ಪ್ರಕಾಶ್, ಕೃಷ್ಣಾಪುರ ರಾಜಣ್ಣ, ಸಿಂಧುಘಟ್ಟ ಮುದ್ದುಕುಮಾರ್, ನಗರೂರು ಕುಮಾರ್, ಹೊನ್ನೇಗೌಡ, ಬ್ಯಾಲದಕೆರೆ ಶಿವಣ್ಣ, ಲಕ್ಷ್ಮೀಪುರ ನಾಗರಾಜು, ನಾರಾಯಣಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-40-501236291

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.