ಕೆ.ಆರ್.ಪೇಟೆ: ಹೇಮಾವತಿ ನದಿಯಿಂದ ಕಾಲುವೆಗಳಿಗೆ ಎಡದಂಡೆ ಮುಖಾಂತರ 500 ಕ್ಯುಸೆಕ್ ನೀರು ಬಿಡಲಾಗಿದ್ದು ಕೆ.ಆರ್.ಪೇಟೆ ಭಾಗದಲ್ಲಿ ಕೇವಲ 100 ಕ್ಯೂಸೆಕ್ ನೀರು ಹರಿಯುತ್ತಿದ್ದು ಮೊದಲು ತಾಲ್ಲೂಕಿನ ಕೆರೆಕಟ್ಟೆಗಳಿಗೆ ನೀರು ತುಂಬಿಸುವಂತೆ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಮರುವನಹಳ್ಳಿ ಶಂಕರ್ ಒತ್ತಾಯಿಸಿದ್ದಾರೆ.

ನೀರನ್ನು ನೇರವಾಗಿ ಕೆರೆತೊಣ್ಣೂರು ಮತ್ತು ನಾಗಮಂಗಲದ ಕೆರೆಗೆ ಹರಿಸದೆ ಮೊದಲು ಸಿಂಧುಘಟ್ಟ ಮತ್ತು ಹರಳಹಳ್ಳಿ ಕೆರೆಯ ವ್ಯಾಪ್ತಿಯಲ್ಲಿ ಬರುವ 25 ಕೆರೆ ಕಟ್ಟೆಗಳಿಗೆ ನೀರನ್ನು ತುಂಬಿಸಬೇಕು. ಇದರಿಂದ ನೀರು ಹಳ್ಳದಲ್ಲಿ ಹರಿಯದಿರುವುದರಿಂದ ಅಂತರ್ಜಲ ಹೆಚ್ಚಾಗುತ್ತದೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಿದಂತಾಗುತ್ತದೆ ಎಂದು ಅವರು ಹೇಳಿದ್ದಾರೆ.

ಹೇಮಾವತಿ ಜಲಾಶಯದಲ್ಲಿ ಸುಮಾರು 16.5 ಟಿಎಂಸಿ ಅಡಿ ನೀರು ಲಭ್ಯವಿರುವ ಮಾಹಿತಿ ಇದೆ. ಅಲ್ಲಿಂದ ಕನಿಷ್ಠ ನಾಲ್ಕು ಟಿಎಂಸಿ ಅಡಿ ನೀರನ್ನು ತಾಲ್ಲೂಕಿಗೆ ಹರಿಸಿದರೆ ಹೇಮಾವತಿ ಎಡದಂಡ ನಾಲೆಯ ಎಲ್ಲ ಕೆರೆಕಟ್ಟೆಗಳು ತುಂಬುತ್ತವೆ. ಜನ ಜಾನುವಾರುಗಳಿಗೂ ಕುಡಿಯಲು ನೀರು ದೊರೆತಂತಾಗುತ್ತದೆ. ಈ ಭಾಗದ ಶಾಸಕರು ಸರ್ಕಾರದ ಮೇಲೆ ಒತ್ತಡ ತಂದು ಗರಿಷ್ಠ ಪ್ರಮಾಣದಲ್ಲಿ ನೀರು ಹರಿಸಲು ಕ್ರಮ ವಹಿಸುವಂತೆ ಅವರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-40-1437243393

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.