ಕೆ.ಆರ್.ಪೇಟೆ: ‘ಕನ್ನಡದ ಅಸ್ಮಿತೆಯನ್ನು ಎತ್ತಿ ಹಿಡಿಯುವ ಕೆಲಸವನ್ನು ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತು ಬದ್ಧತೆಯಿಂದ, ಪ್ರಾಮಾಣಿಕವಾಗಿ ಮಾಡಿಕೊಂಡು ಬಂದಿದೆ. ಪರಿಣಾಮ ಕನ್ನಡ ಭಾಷೆ ಮತ್ತು ಸಂಸ್ಕೃತಿ ಉಳಿದು ಬೆಳೆಯಲು ಸಹಕಾರಿಯಾಗಿದೆ’ ಎಂದು ಉಪನ್ಯಾಸಕ ಆರ್.ಬಿ.ಪದ್ಮನಾಭ ಹೇಳಿದರು.

ಪಟ್ಟಣದ ಮಹಿಳಾ ಸರ್ಕಾರಿ ಪದವಿ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಕಸಾಪ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದರು.

‘ಶತಮಾನಗಳ ಹಿಂದೆ ಕನ್ನಡ ನಾಡು ಮತ್ತು ನುಡಿ ಒಂದಾಗಬೇಕು. ಪ್ರಾಂತಭೇದ ಅಳಿಸಬೇಕೆಂಬ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಲಾಯಿತು. ಅಂದಿನ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದಿವಾನರಾಗಿದ್ದ ಸರ್.ಎಂ.ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯ ಫಲವಾಗಿ ಸ್ಥಾಪಿತವಾದ ಕಸಾಪ ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆಯಾಗಿ ಕೆಲಸ ಮಾಡುತ್ತ ಬಂದಿದೆ. ನಾಡು ನುಡಿ ,ನೆಲ ಜಲ ವಿಚಾರಗಳಲ್ಲಿ ಸ್ಪಷ್ಟನಿಲುವುಗಳನ್ನು ಪ್ರದರ್ಶಿಸುತ್ತ ಬಂದಿದೆ. ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸುವ ನಿಟ್ಟಿನಲ್ಲಿ ಕಳೆದ 113 ವರ್ಷಗಳಿಂದ ಕಾರ್ಯ ನಿರ್ವಹಿಸುವ ಮೂಲಕ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾಗಿ ಗುರುತಿಸಿಕೊಂಡಿದ್ದು ಕನ್ನಡ ಸಾಹಿತ್ಯ ಪರಿಷತ್ತಿನ ಅಡಿ ನೂರಾರು ಕನ್ನಡ ಪರ ಸಂಘಟನೆಗಳು ಇಂದು ಬೆಳೆದು ನಿಂತು ನಾಡು ನುಡಿವಿಚಾರದಲ್ಲಿ ಪ್ರಬಲ ಹೋರಾಟ ನಡೆಸಲು ಸಹಕಾರಿಯಾಗಿವೆ’ ಎಂದರು.

ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ಮಾತನಾಡಿ, ‘ಕನ್ನಡಿಗರಲ್ಲಿನ ಕನ್ನಡ ಪ್ರೇಮವನ್ನು ಜಾಗೃತಿ ಮೂಡಿಸುವ ಜೊತೆಗೆ, ಕನ್ನಡ ಸಾಹಿತ್ಯ ಲೋಕದಲ್ಲಿ ಕೆಲಸ ಮಾಡಿದ ಸಾಹಿತಿಗಳನ್ನು ಪರಿಚಯಿಸುವ ಕೆಲಸವನ್ನು ಕಸಾಪ ಮಾಡುತ್ತಿದ್ದು ಹೀಗಾಗಿ ಕನ್ನಡ ಭಾಷೆ ಜೀವಂತ ಭಾಷೆಯಾಗಿ ಉಳಿಯಲು ಸಾಧ್ಯವಾಗಿದೆ. ಕನ್ನಡಿಗರಾದ ನಾವು ಕನ್ನಡದ ನೆಲದಲ್ಲಿ ವಾಸ ಮಾಡುತ್ತಿರುವ ಅನ್ಯ ಭಾಷಿಕರೂ ಕನ್ನಡ ಕಲಿಯುವಂತೆ ಮಾಡುವ ಕಾರ್ಯ ಮಾಡಬೇಕಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯ’ ಎಂದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ.ಅನುರಾಧ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಭಾಷಾ ಪ್ರಾಧ್ಯಾಪಕಿ ಪ್ರತಿಮಾ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಕೆ. ಎಸ್.ಸೋಮಶೇಖರ್, ಕೆ.ಕಾಳೇಗೌಡ, ಕೆ.ಆರ್.ನೀಲಕಂಠ , ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ಸವಿತಾ ರಮೇಶ್, ಶಿಕ್ಷಕರಾದ ಪದ್ಮೇಶ್, ಮಧು, ಕಟ್ಟೆ ಮಹೇಶ್ ಭಾಗವಹಿಸಿದ್ದರು. ಪ್ರಗತಿಪರ ಕೃಷಿಕರಾದ ಎಚ್.ವೈ. ಜಯಕುಮಾರ್ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-40-1233263695

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.