ಕೆ.ಆರ್.ಪೇಟೆ: ಪಟ್ಟಣದ ಹೊರವಲಯದ ಚಿಕ್ಕೋನಹಳ್ಳಿ ಬಳಿ ಇರುವ ಮಾತೃಭೂಮಿ ಉಚಿತ ವೃದ್ದಾಶ್ರಮಕ್ಕೆ ಪಾಂಡವಪುರ ಉಪ ವಿಭಾಗಾಧಿಕಾರಿ ಕೆ.ಆರ್. ಶ್ರೀನಿವಾಸ್ ಶನಿವಾರ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳನ್ನು ಪರಿಶೀಲನೆ ನಡೆಸಿ ಸೇವೆ ಸಲ್ಲಿಸಿದರು.

ಆಶ್ರಮದಲ್ಲಿರುವ ಅನಾಥರ ಯೋಗ ಕ್ಷೇಮ ವಿಚಾರಿಸಿದ ಅವರು ಪಾರ್ಶ್ವ ರೋಗಕ್ಕೆ ತುತ್ತಾಗಿ ಕೈ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ವೃದ್ಧನಿಗೆ ತಾವೇ ಶೇವಿಂಗ್ ಹಾಗೂ ಕೇಶ ಮುಂಡನ ಮಾಡಿ ಸ್ನಾನ ಮಾಡಿಸಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಆತ್ಮವಿಶ್ವಾಸ ತುಂಬಿದರು. ಅಲ್ಲದೇ ಊಟ ಬಡಿಸಿ ತಾವೂ ಸಹಪಂಕ್ತಿಯಲ್ಲಿ ಕುಳಿತು ಊಟ ಮಾಡಿದದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ನರ್ಸ್ ಮತ್ತು ಸಿಬ್ಬಂದಿ ಆಶ್ರಮವಾಸಿಗಳ ಆರೋಗ್ಯ ತಪಾಸಣೆ ನಡೆಸಿ ಆರೋಗ್ಯ ಸಲಹೆ ನೀಡಿದರು. ವೃದ್ದಾಶ್ರಮದ ವ್ಯವಸ್ಥಾಪಕ ಜೈಹಿಂದ್ ನಾಗಣ್ಣ, ಅರಕಲಗೂಡು ಶ್ರೀನಿವಾಸ್, ಹಿರಿಯ ಆರೋಗ್ಯ ಪರಿವೀಕ್ಷಕ ಎಸ್.ಎಲ್. ಸತೀಶ್, ಉಪವಿಭಾಗಾಧಿಕಾರಿ ಅವರ ಅವರ ಪತ್ನಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-40-81410821

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.