ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಆರ್‌ಎಸ್‌ ಬಳಿ ಗಣಿಗಾರಿಕೆ ತಡೆಗಟ್ಟಲಿ

ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯ
Last Updated 18 ಆಗಸ್ಟ್ 2019, 5:45 IST
ಅಕ್ಷರ ಗಾತ್ರ

ಮದ್ದೂರು: ಕೆಆರ್‌ಎಸ್‌ ಜಲಾಶಯದ ಸುತ್ತಲಿನ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ತಡೆಗಟ್ಟ ಬೇಕು ಎಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದರು.

ಪಟ್ಟಣದ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದರು.

ಕೆಆರ್‌ಎಸ್‌ ಜಲಾಶಯವು ಲಕ್ಷಾಂತರ ಜನರ ಜೀವನಾಡಿ. ಅದನ್ನು ಸಂರಕ್ಷಣೆ ಮಾಡಬೇಕಾದದ್ದು ಎಲ್ಲರ ಕರ್ತವ್ಯ. ಜಲಾಶಯದ ಸುತ್ತಮುತ್ತ ಗಣಿಗಾರಿಕೆ ನಡೆಸುವುದರಿಂದ ಅಣೆಕಟ್ಟೆಗೆ ತೊಂದರೆ ಆಗಲಿದೆ ಎಂದು ಎಚ್ಚರಿಸಿದರು.

ರಾಜ್ಯದ ಕೊಡಗು, ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಶಾಂತಿ, ನೆಮ್ಮದಿ ಸಿಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಗಿದೆ.

ನೆರೆ ಸಂತ್ರಸ್ತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಕ್ತ ಪರಿಹಾರ ನೀಡಬೇಕು. ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ದೇವಸ್ಥಾನದ ಪ್ರಧಾನ ಅರ್ಚಕ ಪ್ರದೀಪ್ ಆಚಾರ್ಯ ಅವರು ವಿಶೇಷ ಪೂಜೆ ನೆರವೇರಿಸಿದರು. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು 1 ರೂಪಾಯಿ 25 ಪೈಸೆ ಹರಕೆ ಕಟ್ಟಿದರು.

ಈ ಸಂದರ್ಭದಲ್ಲಿ ಸಿಪಿಐ ಮಹೇಶ್, ಪಿಎಸ್ಐ ಮಂಜೇಗೌಡ, ಮೋಹನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT