ಗುರುವಾರ , ಸೆಪ್ಟೆಂಬರ್ 24, 2020
24 °C

ಕೆಆರ್‌ಎಸ್‌ ಭರ್ತಿಗೆ ಅರ್ಧ ಅಡಿ ಬಾಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಕೆಆರ್‌ಎಸ್‌ ಜಲಾಶಯದ ಭರ್ತಿಗೆ ಅರ್ಧ ಅಡಿ ಮಾತ್ರವೇ ಬಾಕಿ ಉಳಿದಿದ್ದು ಶುಕ್ರವಾರ ಸಂಜೆಯ ವೇಳೆಗೆ ಜಲಾಶಯದ ನೀರಿನ ಮಟ್ಟ 124.25ಕ್ಕೆ ತಲು‍ಪಿದೆ.

ಶನಿವಾರ ಬೆಳಿಗ್ಗೆ ವೇಳೆಗೆ ಗರಿಷ್ಠ ಮಟ್ಟ (124.80 ಅಡಿ) ತಲುಪುವ ಸಾಧ್ಯತೆ ಇದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಅಪಾರ ಪ್ರಮಾಣದ ಮಳೆ ಸುರಿದ ಕಾರಣ 10 ದಿನದಿಂದೀಚೆಗೆ 16 ಅಡಿ ನೀರು ಹರಿದು ಬಂದಿದೆ.

ಶುಕ್ರವಾರ ಸಂಜೆ 10,941 ಕ್ಯುಸೆಕ್ ಒಳಹರಿವು, 3,864 ಕ್ಯುಸೆಕ್ ಹೊರಹರಿವು ದಾಖಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು