ಶ್ರೀರಂಗಪಟ್ಟಣ: ಕಾವೇರಿ ಕೊಳ್ಳದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ತಾಲ್ಲೂಕಿನ ಕೆಆರ್ಎಸ್ ಜಲಾಶಯಕ್ಕೆ ಒಂದೇ ದಿನದಲ್ಲಿ 4 ಅಡಿಗಳಷ್ಟು ನೀರು ಹರಿದು ಬಂದಿದೆ.

ಅಣೆಕಟ್ಟೆಗೆ ಮಂಗಳವಾರ ಸಂಜೆಯಿಂದ 20 ಸಾವಿರ ಕ್ಯುಸೆಕ್ಗೂ ಹೆಚ್ಚು ನೀರು ಹರಿದು ಬರುತ್ತಿದ್ದು, ಒಳ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಜಲಾಶಯದಲ್ಲಿ 89.32 ಅಡಿ ಇದ್ದ ನೀರಿನ ಮಟ್ಟ ಮಂಗಳವಾರ 93 ಅಡಿಗೆ ತಲುಪಿದೆ. ಅಣೆಕಟ್ಟೆಯಿಂದ 364 ಕ್ಯುಸೆಕ್ ನೀರನ್ನು ಕುಡಿಯುವ ಉದ್ದೇಶಕ್ಕೆ ಹೊರ ಬಿಡಲಾಗುತ್ತಿದೆ.

ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 83.2 ಅಡಿ ನೀರಿತ್ತು. 2893 ಕ್ಯೂಸೆಕ್ ಒಳ ಹರಿವು ಹಾಗೂ 537 ಕ್ಯುಸೆಕ್ ಹೊರ ಹರಿವು ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.