ಶ್ರೀರಂಗಪಟ್ಟಣ: ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆಗೆ ನೀರಿನ ಒಳ ಹರಿವಿನ ಪ್ರಮಾಣ ಸೋಮವಾರ ಸಂಜೆಯಿಂದ ಏರಿಕೆಯಾಗಿದ್ದು, ಜಲಾಶಯದ ನೀರಿನ ಮಟ್ಟ 111 ಅಡಿ ದಾಟಿದೆ.

‘ಜಲಾಶಯಕ್ಕೆ 16,936 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಇದೇ ಪ್ರಮಾಣದಲ್ಲಿ ನೀರು ಹರಿದು ಬಂದರೆ ಜಲಾಶಯದ ನೀರಿನ ಮಟ್ಟದ ಇನ್ನು 24 ಗಂಟೆಗಳಲ್ಲಿ 113 ಅಡಿ ತಲುಪಲಿದೆ’ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ದಿನಗಳ ಹಿಂದೆ ಜಲಾಶಯದ ಒಳ ಹರಿವು 3500 ಕ್ಯುಸೆಕ್ ಇತ್ತು. 124.80 ಅಡಿ ಗರಿಷ್ಠ ಮಟ್ಟದ ಜಲಾಶಯ (49.45 ಟಿಎಂಸಿ) ದಲ್ಲಿ 32.68 ಟಿಎಂಸಿ ನೀರು ಸಂಗ್ರಹವಾಗಿದೆ. ನದಿ ಮತ್ತು ಕುಡಿಯುವ ಉದ್ದೇಶಕ್ಕೆ 951 ಕ್ಯುಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಕಳೆದ ವರ್ಷದ ಇದೇ ದಿನ ಜಲಾಶಯದಲ್ಲಿ 87 ಅಡಿ (14.22 ಟಿಎಂಸಿ) ನೀರಿತ್ತು. 2120 ಕ್ಯುಸೆಕ್ ಒಳ ಹರಿವು, 461 ಕ್ಯುಸೆಕ್ ಹೊರ ಹರಿವು ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.