ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರದಲ್ಲಿ ತಮಿಳುನಾಡಿಗೆ 2 ಟಿಎಂಸಿ ನೀರು

Last Updated 28 ಜುಲೈ 2019, 20:00 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ತಾಲ್ಲೂಕಿನ ಕೆಆರ್‌ಎಸ್ ಜಲಾಶಯದಿಂದ ಒಂದು ವಾರದಲ್ಲಿ ಸುಮಾರು 2 ಟಿಎಂಸಿ ಅಡಿ ನೀರು ತಮಿಳುನಾಡಿಗೆ ಹರಿಸಲಾಗಿದೆ.

ಜುಲೈ 19ರಿಂದ ಜಲಾಶಯದ ಪ್ಲಸ್ 80 ಅಡಿ ಮಟ್ಟದ ಗೇಟ್‌ಗಳ ಮೂಲಕ ನೀರನ್ನು ನದಿಗೆ ಹರಿಸಲಾಗುತ್ತಿದೆ. ಹೊರಹರಿವಿನ ಪ್ರಮಾಣ ಸರಾಸರಿ 7 ಸಾವಿರ ಕ್ಯುಸೆಕ್ ಇದೆ.

ನದಿ ಒಡ್ಡಿನ ನಾಲೆಗಳಾದ ವಿರಿಜಾ, ಸಿಡಿಎಸ್, ರಾಜಪರಮೇಶ್ವರಿ, ರಾಮಸ್ವಾಮಿ, ಮಾಧವಮಂತ್ರಿ ನಾಲೆಗಳಿಗೆ ಒಂದು ಸಾವಿರ ಕ್ಯುಸೆಕ್‌ ನೀರು ಹರಿಯುತ್ತಿದೆ. 4 ಸಾವಿರ ಕ್ಯುಸೆಕ್ ನೀರು ತಮಿಳುನಾಡಿಗೆ ಹರಿದು ಹೋಗುತ್ತಿದೆ. ಜಲಾಶಯದ ಮುಖ್ಯ ನಾಲೆಯಾದ ವಿಶ್ವೇಶ್ವರಯ್ಯ ನಾಲೆ, ಬಲದಂಡೆ (ಆರ್‌ಬಿಎಲ್ಎಲ್) ನಾಲೆ ಹಾಗೂ ಎಡದಂಡೆ (ಎಲ್‌ಬಿಎಲ್ಎಲ್) ನಾಲೆಗೆ ಉಳಿದ ನೀರು ಹರಿಸಲಾಗುತ್ತಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಕೆಆರ್‌ಎಸ್‌ ಜಲಾಶಯದಲ್ಲಿ ಭಾನುವಾರ 87.48 ಅಡಿಗಳಷ್ಟು (ಗರಿಷ್ಠ 124.80) ನೀರಿನ ಸಂಗ್ರಹ ಇತ್ತು. ಕಳೆದ ವರ್ಷ ಇದೇ ಅವಧಿಯಲ್ಲಿ 122.70 ಅಡಿ ನೀರಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT