ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿಯವರಿಗೆ ಸಕ್ಕರೆ ಕಾರ್ಖಾನೆ: ಖಂಡನೆ

ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ
Last Updated 8 ಮಾರ್ಚ್ 2020, 10:22 IST
ಅಕ್ಷರ ಗಾತ್ರ

ಮದ್ದೂರು: ಜಿಲ್ಲೆಯ ಮೈಷುಗರ್ ಹಾಗೂ ಪಾಂಡವಪುರ ಸಕ್ಕರೆ ಕಾರ್ಖಾನೆಗಳನ್ನು ಖಾಸಗಿಯವರಿಗೆ ನೀಡಲು ರಾಜ್ಯ ಸರ್ಕಾರ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ದೂರಿದರು.

ತಾಲ್ಲೂಕಿನ ಕೂಳಗೆರೆ ಗ್ರಾಮದ ನಿವಾಸಿ, ಜೆಡಿಎಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಕೂಳಗೆರೆ ಶೇಖರ್ ಅವರ ಮಗ ಕೆ.ಎಸ್.ಕುಲದೀಪ ಹಾಗೂ ಜಯಶ್ರೀ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ನೂತನ ದಂಪತಿಯನ್ನು ಆಶೀರ್ವದಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆ ಗಳನ್ನು ಖಾಸಗಿಯವರಿಗೆ ಗುತ್ತಿಗೆ ನೀಡಲು ಮುಂದಾಗಿರುವುದು ಖಂಡನೀಯ. ಸರ್ಕಾರ ಮುಂದೆ ಏನು ಕ್ರಮ ಕೈಗೊಳ್ಳುತ್ತದೆಯೋ ಎಂಬುದನ್ನು ಕಾದುನೋಡಬೇಕಾಗಿದೆ. ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಬಜೆಟ್‌ನಲ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಪುನರುಜ್ಜೀವನಕ್ಕಾಗಿ ₹100 ಕೋಟಿ ಅನುದಾನ ಮೀಸಲಿ ರಿಸಿದ್ದೆ. ಹೊಸ ಕಾರ್ಖಾನೆ ಪ್ರಾರಂಭಿಸಲು ಪ್ರಸ್ತಾಪಿಸಿದ್ದೆ. ಆದರೆ, ಆ ವೇಳೆಗೆ ಸರ್ಕಾರ ಪತನವಾಯಿತು ಎಂದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ ಬಜೆಟ್‌ನಲ್ಲಿ ಮಂಡ್ಯ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ನಾನು ಈ ಹಿಂದೆ ಜಿಲ್ಲೆಗೆ ನೀಡಿದ್ದ ಅನುದಾನವನ್ನು ವಾಪಸ್ ಪಡೆಯುವ ಮೂಲಕ ಜನರ ತಾಳ್ಮೆ ಪರೀಕ್ಷೆ ಮಾಡುತ್ತಿದ್ದಾರೆ. ಕುಂಠಿತವಾಗಿರುವ ಜಿಲ್ಲೆಯ ಅಭಿವೃದ್ಧಿಯನ್ನು ಸರಿಪಡಿಸದೇ ಹೋದರೆ ಮುಂದಿನ ದಿನಗಳಲ್ಲಿ ಜಿಲ್ಲೆಯ ಜನರೇ ತಕ್ಕಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ರಮೇಶ್ ಬಾಬು ರಾಜೀನಾಮೆ ನೀಡಿರುವುದಕ್ಕೆ ಪ್ರಾಶಸ್ತ್ಯ ನೀಡಬೇಕಾಗಿಲ್ಲ. ಜೆಡಿಎಸ್ ಪಕ್ಷ ನಿಂತಿರುವುದು ಕಾರ್ಯಕರ್ತರಿಂದ. ಪಕ್ಷದಲ್ಲಿ ಅನೇಕ ಸ್ಥಾನಮಾನಗಳನ್ನು ಪಡೆದಿದ್ದಾರೆ. ಅಧಿಕಾರ ಸಿಗದಿದ್ದರೆ ಹೊರ ಹೋಗುತ್ತಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

ಮುಖಂಡರಾದ ರಾಮೇಗೌಡ, ಎನ್.ಎಂ.ರಾಮಲಿಂಗಯ್ಯ, ರವಿಗೌಡ, ಕೃಷ್ಣ, ನಂದೀಶ, ಅನಿಲ್, ತಿಬ್ಬೇಗೌಡ, ಶಿವಮಾದು, ಪುಟ್ಟಸ್ವಾಮಿ, ಸ್ವಾಮಿ, ಪುಟ್ಟರಾಜು, ನಾಡಗೌಡ, ಮಲ್ಲಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT