ಪಾಂಡವಪುರ: ಮೇಲ್ದರ್ಜೆಗೇರಿಸಲಾಗಿದ್ದ ತಾಲ್ಲೂಕಿನ ಕ್ಯಾತನಹಳ್ಳಿಯ ಪೊಲೀಸ್ ಠಾಣೆಯನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಇತ್ತೀಚೆಗೆ ಉದ್ಫಾಟಿಸಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ‘ತಾಲ್ಲೂಕಿನ ಹಲವಾರು ಗ್ರಾಮಗಳು ಶ್ರೀರಂಗಪಟ್ಟಣ ಗ್ರಾಮಾಂತರ ಮತ್ತು ಕೆ.ಆರ್.ಎಸ್.ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಟ್ಟಿದ್ದವು. ಇದರಿಂದ ಈ ಭಾಗದ ಜನರು ದೂರದ ಠಾಣೆಗಳಿಗೆ ತೆರಳಬೇಕಿತ್ತು. ಸ್ಥಳೀಯವಾಗಿ ಸಾರ್ವಜನಿಕರ ಸಮಸ್ಯೆ ಮತ್ತು ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಲು ಅನುಕೂಲವಾಗುವಂತೆ ದೊಡ್ಡ ಗ್ರಾಮದ ಕ್ಯಾತನಹಳ್ಳಿಯಲ್ಲಿ ನೂತನ ಪೊಲೀಸ್ ಠಾಣೆ ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಠಾಣೆ ವ್ಯಾಪ್ತಿಗೆ ಸೇರಿರುವ ಎಲ್ಲಾ ಗ್ರಾಮದ ಜನರಿಗೂ ಠಾಣೆಯ ಸೇವೆ ದೊರೆಯಲಿದೆ’ ಎಂದರು.

ಕ್ಯಾತನಹಳ್ಳಿ ಠಾಣೆ ವ್ಯಾಪ್ತಿಗೆ ಕ್ಯಾತನಹಳ್ಳಿ, ಹರವು, ಅರಳಕುಪ್ಪೆ, ಡಿಂಕಾ, ಬನ್ನಂಗಾಡಿ, ಕಟ್ಟೇರಿ, ಅಲ್ಪಹಳ್ಳಿ, ಮಲ್ಲಿಗೆರೆ, ಬೇಬಿ, ಬೇಬಿಬೆಟ್ಟದ ಕಾವಲು, ಕಣಿವೆ ಕೊಪ್ಪಲು, ಶ್ಯಾದನಹಳ್ಳಿ, ಹುಲ್ಕೆರೆ, ಹುಲ್ಕೆರೆ ಕೊಪ್ಪಲು, ಡಿಂಕಾ ಶೆಟ್ಟಹಳ್ಳಿ, ಕಾವೇರಿಪುರ, ಹಾಗನಹಳ್ಳಿ, ಕನ್ನಂಬಾಡಿ ಸೇರಿದಂತೆ ಒಟ್ಟು 34 ಗ್ರಾಮಗಳ ಸೇರುತ್ತವೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜನ ಬಾಲದಂಡಿ ಮಾತನಾಡಿ, ‘ಕ್ಯಾತನಹಳ್ಳಿಯಲ್ಲಿ ಪ್ರಾರಂಭವಾಗಿರುವ ಪೊಲೀಸ್ ಠಾಣೆಯಲ್ಲಿ ಇಂದಿನಿಂದಲೇ ಸೇವೆ ಆರಂಭವಾಗುತ್ತದೆ. ಮುಂದಿನ ದಿನಗಳಲ್ಲಿ ಪೊಲೀಸ್ ಠಾಣೆಗೆ ಅಗತ್ಯವಿರುವ ಸೂಕ್ತ ಕಟ್ಟಡ ನಿರ್ಮಿಸಿ ಹೆಚ್ಚುವರಿ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ್ದ 15 ಗ್ರಾಮಗಳು, ಕೆಆರ್ಎಸ್ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ್ದ 13 ಗ್ರಾಮಗಳು ಹಾಗೂ ಪಾಂಡವಪುರ ಪೊಲೀಸ್ ಠಾಣೆಗೆ ಸೇರಿದ್ದ 6 ಗ್ರಾಮಗಳು ಸೇರಿದಂತೆ ಒಟ್ಟು 34 ಗ್ರಾಮಗಳನ್ನು ಕ್ಯಾತನಹಳ್ಳಿ ಪೊಲೀಸ್ ಠಾಣೆ ಕಾರ್ಯ ವ್ಯಾಪ್ತಿಗೆ ವರ್ಗಾಯಿಸಲಾಗಿದೆ. ಎಲ್ಲಾ ರೀತಿಯ ಪೊಲೀಸ್ ಸೇವೆಗಳು ಠಾಣೆ ವ್ಯಾಪ್ತಿಯ ಜನರಿಗೆ ಲಭ್ಯವಾಗಲಿವೆ’ ಎಂದು ಹೇಳಿದರು.

ಠಾಣೆಗೆ ಒಬ್ಬ ಪೊಲೀಸ್ ಇನ್ಸ್ಪೆಕ್ಟರ್, ಮೂವರು ಪಿಎಸ್ಐ, ಮೂವರು ಹೆಡ್ ಕಾನ್ಸ್ಟೆಬಲ್ ಹಾಗೂ ಎಂಟು ಕಾನ್ಸ್ಟೆಬಲ್ ಸೇರಿದಂತೆ ಒಟ್ಟು 20ಕ್ಕೂ ಹೆಚ್ಚು ಸಿಬ್ಗಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರಸ್ವಾಮಿ, ಡಿವೈಎಸ್ಪಿ ಶಾಂತಮಲ್ಲಪ್ಪ, ಪೊಲೀಸ್ ಇನ್ಸ್ಪೆಕ್ಟರ್ಗಳಾದ ಶರತ್ಕುಮಾರ್, ವಿವೇಕಾನಂದ, ಜಿ.ಕುಮಾರ, ಅನಂತಕುಮಾರ, ಸಬ್ ಇನ್ಸ್ಪೆಕ್ಟರ್ಗಳಾದ ಆರ್.ಬಿ.ಉಮೇಶ್, ಲಿಂಗರಾಜು, ರಕ್ಷಿತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.