ಶ್ರೀರಂಗಪಟ್ಟಣ: ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ಗುರುಕುಲ ಹೆಸರಿನ ಶಿಕ್ಷಣ ಸಂಸ್ಥೆ ಸರ್ಕಾರಿ ಜಮೀನನ್ನು ಅತಿಕ್ರಮಿಸಿದ್ದು, ಅದನ್ನು ತೆರವು ಮಾಡಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಮಂಗಳವಾರ ಮನವಿ ಸಲ್ಲಿಸಿದರು.

ಪಟ್ಟಣದಲ್ಲಿ ತಾಲ್ಲೂಕು ಕಚೇರಿಯಲ್ಲಿ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಅವರಿಗೆ ಮನವಿ ಸಲ್ಲಿಸಿದರು. ಬೆಳಗೊಳ ಗ್ರಾಮದ ಸ.ನಂ. 100, ಸ.ನಂ. 101 ಮತ್ತು 102ರಲ್ಲಿ ಸರ್ಕಾರಿ ಭೂಮಿ ಇದ್ದು, ಇದನ್ನು ಸೇರಿಸಿಕೊಂಡು ಖಾಸಗಿ ಶಾಲೆಯ ಆಡಳಿತ ಮಂಡಳಿ ಕಾಂಪೌಂಡ್ ನಿರ್ಮಿಸಿದೆ. ಸ್ಥಳೀಯ ಕಂದಾಯ ಅಧಿಕಾರಿಗಳಿಗೆ ವಿಷಯ ಗೊತ್ತಿದ್ದರೂ ಮೌನವಾಗಿದ್ದಾರೆ. ಸದರಿ ಜಾಗದ ಸರ್ವೆ ನಡೆಸಿ ಅತಿಕ್ರಮಕ್ಕೆ ಒಳಗಾಗಿರುವ ಸರ್ಕಾರಿ ಜಮೀನನ್ನು ತೆರವು ಮಾಡಿಸಬೇಕು ಎಂದು ಗ್ರಾಮದ ಮುಖಂಡರಾದ ಸುನಿಲ್, ವಿಷಕಂಠು ಇತರರು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ, ಬೆಳಗೊಳದಲ್ಲಿ ಸರ್ಕಾರಿ ಜಮೀನು ಅತಿಕ್ರಮದ ಬಗ್ಗೆ ಬಂದಿರುವ ದೂರು ಪರಿಶೀಲಿಸಲಾಗುವುದು. ಸ್ಥಳೀಯ ಕಂದಾಯ ಅಧಿಕಾರಿಗಳಿಂದ ವರದಿ ಪಡೆಯುತ್ತೇನೆ. ಅತಿಕ್ರಮ ನಡೆದಿರುವುದು ಖಚಿತವಾದರೆ ನಿರ್ದಾಕ್ಷಿಣ್ಯವಾಗಿ ತೆರವು ಮಾಡಿಸಲಾಗುವುದು ಎಂದು ಭರವಸೆ ನೀಡಿದರು. ಗ್ರಾಮಸ್ಥರಾದ ಮಹೇಶ್, ರಾಜು, ಚಂದ್ರು, ಪೈ.ವೆಂಕಟೇಶ್, ಶಿವಕುಮಾರ್, ತೇಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.