ಸೋಮವಾರ, ಮಾರ್ಚ್ 20, 2023
30 °C
ಮನ್‌ಮುಲ್‌ನಲ್ಲಿ ನಡೆದಿರುವ ಹಾಲಿಗೆ ನೀರು ಬೆರೆಸುತ್ತಿದ್ದ ಹಗರಣ: ಸಭೆ ನಡೆಸಿದ ಸುಮಲತಾ ಅಂಬರೀಷ್‌

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮದ್ದೂರು: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್‌ಮುಲ್)ದಲ್ಲಿ ನಡೆದಿರುವ ಹಾಲಿಗೆ ನೀರು ಬೆರಸುತ್ತಿದ್ದ ಹಗರಣಕ್ಕೆ ಸಂಬಂಧಿಸಿದಂತೆ ತಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಬೇಕು ಎಂದು ಸಂಸದೆ ಸುಮಲತಾ ಆಗ್ರಹಿಸಿದರು.

ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯಲ್ಲಿರುವ ಮನ್‌ಮುಲ್‌ಗೆ ಭೇಟಿ ನೀಡಿ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿ ನಿರ್ದೇಶಕರೊಂದಿಗೆ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಹಾಲಿಗೆ ನೀರು ಬೆರೆಸುವ ಅಕ್ರಮ ಚಟುವಟಿಕೆ ಹಿಂದಿನಿಂದಲೂ ನಡೆಯುತ್ತಿತ್ತು ಎಂಬ ಸಂದೇಹ ಇದೆ. ಆದರೆ, ಇದು ಹಿಂದೆ ಏಕೆ ಗೊತ್ತಾಗಿಲ್ಲ ಎಂಬ ಪ್ರಶ್ನೆ ಕಾಡುತ್ತಿದೆ. ಸಿಬಿಐ ಅಥವಾ ಸಿಐಡಿ ಸೇರಿದಂತೆ ಯಾವುದೇ ತನಿಖೆ ನಡೆಸಲಿ. ಆದರೆ ಸತ್ಯ ಹೊರ ಬರಬೇಕು. ಆ ಮೂಲಕ ಜಿಲ್ಲೆಯ ಹಾಲು ಉತ್ಪಾದಕರಿಗೆ ನ್ಯಾಯ ಸಿಗಬೇಕು. ಜುಲೈ 5ರಂದು ಮುಖ್ಯಮಂತ್ರಿ ಜತೆ ಸಭೆ ಇದ್ದು, ಈ ವಿಷಯ ಚರ್ಚಿಸುವುದಾಗಿ ತಿಳಿಸಿದರು.

ಕೆಆರ್‌ಎಸ್ ಅಣೆಕಟ್ಟೆ ಬಿರುಕು ಬಿಟ್ಟಿದಿಯೋ ಇಲ್ಲವೋ ಗೊತ್ತಿಲ್ಲ. ಆದರೆ ಆ ಬಗ್ಗೆ ಶಂಕೆ ಇದೆ. ಕೆಆರ್‌ಎಸ್ ಉಳಿಸುವುದಷ್ಟೇ ನನ್ನ ಉದ್ದೇಶವಾಗಿದ್ದು, ಇದಕ್ಕೆ ಜಿಲ್ಲೆಯ ಎಲ್ಲರೂ ಹೋರಾಟ ಮಾಡಬೇಕು. ಮುಂದಿನ ದಿನಗಳಲ್ಲಿ ಕೆಆರ್‌ಎಸ್ ರಕ್ಷಿಸಿ ಎಂಬ ಹ್ಯಾಷ್ ಟ್ಯಾಗ್ ಬಳಸುವುದಾಗಿ ತಿಳಿಸಿದರು.

ಮನ್‌ಮುಲ್ ಅಧ್ಯಕ್ಷ ರಾಮಚಂದ್ರು, ಉಪಾಧ್ಯಕ್ಷ ರಘುನಂದನ್, ವ್ಯವಸ್ಥಾಪಕ ನಿರ್ದೇಶಕ ಅಶೋಕ್, ಮನ್‌ಮುಲ್ ನಿರ್ದೇಶಕರು, ಅಧಿಕಾರಿಗಳು ಇದ್ದರು

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು