ಗುರುವಾರ , ಅಕ್ಟೋಬರ್ 29, 2020
28 °C
ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರ ಆಗ್ರಹ

ಹೆಚ್ಚುತ್ತಿರುವ ಚಿರತೆ ಹಾವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಕವಾಡಿ: ಜಮೀನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಮಧ್ಯರಾತ್ರಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಬಿಜಿಪುರ ಹೋಬಳಿಯ ಉತ್ತೂರು ಗ್ರಾಮದಲ್ಲಿ ಗುರುವಾರ ನಡೆದಿದೆ.

ಗ್ರಾಮದ ಹೊರ ಭಾಗದ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಜೋಳದ ತೆನೆಯನ್ನು ಕಾಯಲು ಗುರುವಾರ ರಾತ್ರಿ ತಂದೆ ವೆಂಕಟಯ್ಯ ಜತೆ ಚರಣ್ ಮಲಗಿದ್ದರು. ಮಧ್ಯರಾತ್ರಿ ಚಿರತೆಯೊಂದು ಚರಣ್ ಮೇಲೆ ದಾಳಿ ಮಾಡಿದೆ. ಕೂಡಲೇ ವೆಂಕಟಯ್ಯ ಮತ್ತು ಚರಣ್ ಪ್ರತಿರೋಧ ತೋರಿದಾಗ ಚಿರತೆ ಪರಾರಿಯಾಗಿದೆ. ಚರಣ್ ತಲೆಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಜೀವಕ್ಕೆ ಏನು ಅಪಾಯವಿಲ್ಲ ಎಂದು ವೈದ್ಯಾಧಿಕಾರಿ ಡಾ.ವರ್ಣಿತ ತಿಳಿಸಿದ್ದಾರೆ.

ತಾಲ್ಲೂಕಿನ ಬಿಜಿಪುರ ಹೋಬಳಿಯ ಕಗ್ಗಲೀಪುರ ಹಾಗೂ ಬಣವೆ ಗ್ರಾಮಗಳ ಮಧ್ಯೆ ಇರುವ ಅರಣ್ಯ ಪ್ರದೇಶದಲ್ಲಿ ಹಲವು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯರಲ್ಲಿ ಆತಂಕ  ಸೃಷ್ಟಿಸಿದೆ.

ಚಿರತೆ ಸೆರೆಹಿಡಿಯಲು ಬೋನ್ ಇಡಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಆಸೀಫ್ ಅಹ್ಮದ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು