ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳವಳ್ಳಿ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

Published 29 ಅಕ್ಟೋಬರ್ 2023, 13:33 IST
Last Updated 29 ಅಕ್ಟೋಬರ್ 2023, 13:33 IST
ಅಕ್ಷರ ಗಾತ್ರ

ಮಳವಳ್ಳಿ: ತಾಲ್ಲೂಕಿನ ಕಲ್ಕುಣಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದ ಚಿರತೆ ಕೊನೆಗೂ ಭಾನುವಾರ ಬೆಳಗಿನ ಜಾವ ಬೋನಿಗೆ ಬಿದ್ದಿದೆ.

ತಿ.ನರಸೀಪುರ ತಾಲ್ಲೂಕಿನ ಉಡ್ಡಗಲ್ ರಂಗನಾಥಸ್ವಾಮಿ ಬೆಟ್ಟದ ಆಸುಪಾಸಿನ ಗ್ರಾಮವಾದ ಕಲ್ಕುಣಿ, ದೊಡ್ಡೇಗೌಡನಕೊಪ್ಪಲು, ಹೂವಿನಕೊಪ್ಪಲು ಸೇರಿದಂತೆ ಅನೇಕ ಗ್ರಾಮಗಳಲ್ಲಿನ ಜಮೀನಿಗೆ ನುಗ್ಗಿ ಹಸು, ಕುರಿ, ನಾಯಿಗಳನ್ನು ಸೇರಿದಂತೆ ಸಾಕು ಪ್ರಾಣಿಗಳು ತಿಂದು ಪರಾರಿಯಾಗುತ್ತಿದ್ದ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದರು.

ವಲಯ ಅರಣ್ಯಾಧಿಕಾರಿ ಎನ್.ಸಿ.ಮಹದೇವು ನೇತೃತ್ವ ತಂಡ ರೈತ ನಂಜುಂಡಸ್ವಾಮಿ ಎಂಬುವವರ ಜಮೀನಿನಲ್ಲಿನಾಲ್ಕೈದು ದಿನಗಳ ಹಿಂದೆ ಇಟ್ಟಿದ್ದ ಬೋನಿಗೆ ಭಾನುವಾರ ಬೆಳಿಗ್ಗೆ ಚಿರತೆ ಬಿದ್ದಿದೆ.

‘ಸುಮಾರು ಎರಡೂವರೆ ವರ್ಷದ ಗಂಡು ಚಿರತೆಯಾಗಿದ್ದು, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಬಂಡೀಪುರ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು’ ಎಂದು ವಲಯ ಅರಣ್ಯಾಧಿಕಾರಿ ಎನ್.ಸಿ.ಮಹದೇವು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT