ಮಂಡ್ಯ: ತಾಲ್ಲೂಕಿನ ಕೆರಗೋಡು ಹೋಬಳಿಯ ಕೆ.ಗೌಡಗೆರೆ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಇಟ್ಟಿದ್ದ ಬೋನಿನಲ್ಲಿ ಭಾನುವಾರ ಮುಂಜಾನೆ ಗಂಡು ಚಿರತೆ ಸೆರೆಯಾಗಿದೆ.

ಕೆ.ಗೌಡಗೆರೆ ಗ್ರಾಮದ ಪ್ರಕಾಶ್ ಎಂಬುವವರು ಕಬ್ಬಿನ ಗದ್ದೆಯಲ್ಲಿ ಚಿರತೆ ಸಂಚಾರ ಕಂಡುಬಂದಿದೆ ಎಂದು ಅರಣ್ಯ ಇಲಾಖೆಗೆ ಶುಕ್ರವಾರ ಮಾಹಿತಿ ನೀಡಿದ್ದರು.

ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ಕಬ್ಬಿನ ಗದ್ದೆಯಲ್ಲಿ ಬೋನು ಇಟ್ಟು ನಾಯಿಯನ್ನು ಕಟ್ಟಿದ್ದರು. ನಾಯಿ ತಿನ್ನುವ ಆಸೆಯಿಂದ ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.

ಚಿರತೆಗೆ ವೈದ್ಯಕೀಯ ತಪಾಸಣೆ ಮಾಡಿಸಿ, ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಬಂಡೀಪುರ ಅಥವಾ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಬಿಡಲಾಗುವುದು ಎಂದು ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಮಂಡ್ಯ ತಾಲ್ಲೂಕಿನ ಕಬ್ಬಿನ ಗದ್ದೆಗಳಲ್ಲಿ ಚಿರತೆಗಳು ಮರಿಗಳನ್ನು ಹಾಕುವುದು ಹಾಗೂ ನಾಯಿ, ಜಾನುವಾರುಗಳ ಮೇಲೆ ದಾಳಿ ನಡೆಸುವ ಪ್ರಕರಣಗಳು ಜಾಸ್ತಿಯಾಗಿವೆ. ರಾತ್ರಿ ವೇಳೆ ರೈತರು ಹೊಲ, ಗದ್ದೆ, ತೋಟಗಳ ಕಡೆ ಹೋಗಲು ಭಯಪಡುತ್ತಿದ್ದಾರೆ.

‘ಚಿರತೆ ಹಾವಳಿಯನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು. ಮಾನವ–ವನ್ಯಜೀವಿ ಸಂಘರ್ಷ ಪ್ರಕರಣಗಳನ್ನು ನಿಯಂತ್ರಿಸಬೇಕು’ ಎಂದು ಕೆ.ಗೌಡಗೆರೆ ಗ್ರಾಮಸ್ಥರು ಮತ್ತು ರೈತ ಮುಖಂಡರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.