ಕೆ.ಆರ್.ಪೇಟೆ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಬಂಡಿಹೊಳೆ ಗ್ರಾಮದ ಹೊರವಲಯದಲ್ಲಿರುವ ದೇವರಸೇಗೌಡ ಎಂಬುವವರಿಗೆ ಸೇರಿದ ಜಮೀನಿನಲ್ಲಿ ವಿದ್ಯುತ್ ಸ್ಪರ್ಶದಿಂದ ಚಿರತೆಯು ಭಾನುವಾರ ಸಾವಿಗೀಡಾಗಿದೆ.
ಚಿರತೆಯು ಮರ ಏರಲು ಪ್ರಯತ್ನಿಸಿದಾಗ ವಿದ್ಯುತ್ ಕಂಬದ ತಂತಿ ತಗುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ವಿಷಯ ತಿಳಿದ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.